ಮುಲ್ಕಿ; ಕಿಲ್ಪಾಡಿ ಗ್ರಾಮ ಪಂಚಾಯತ್ ವತಿಯಿಂದ ಕಿಲ್ಪಾಡಿ ವ್ಯಾಸ ಮಹರ್ಷಿ ಶಾಲೆಯ ಎಸೆಸೆಲ್ಸಿ ಟಾಪರ್ ವಿದ್ಯಾರ್ಥಿನಿಯರಾದ ವಿ ಅಕ್ಷತಾ ಕಾಮತ್ ಹಾಗೂ ವೀಕ್ಷಾ ವಿ ಶೆಟ್ಟಿ ರವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭ ಕಿಲ್ಪಾಡಿ ಗ್ರಾಪಂ ಉಪಾಧ್ಯಕ್ಷ ಗೋಪಿನಾಥ ಪಡಂಗ ಮಾತನಾಡಿ ಗ್ರಾಮೀಣ ಪ್ರದೇಶವಾದ ಕಿಲ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿದ್ಯಾರ್ಥಿನಿಯರ ಸಾಧನೆ ಗಮನಾರ್ಹವಾಗಿದ್ದು ಇತರ ವಿದ್ಯಾರ್ಥಿಗಳಿಗೆ ಮಾದರಿಯಾಗಲಿ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಿಲ್ಪಾಡಿ ಗ್ರಾಪಂ ಅಧ್ಯಕ್ಷ ಲೀಲಾವತಿ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಪಂಚಾಯತ್ ಸದಸ್ಯೆ ಲಲಿತ ಯಾದವ್, ಶಾಂತ, ಉದ್ಯಮಿ ರಂಜನ್ ಶೆಟ್ಟಿ ಕಿಲ್ಪಾಡಿ ಭಂಡಸಾಲೆ, ನಿವೃತ್ತ ಬ್ಯಾಂಕ್ ಉದ್ಯೋಗಿ ಅಶೋಕ್ ಕುಮಾರ್ ಶೆಟ್ಟಿ, ಪಂಚಾಯತ್ ಪಿಡಿಒ ಪೂರ್ಣಿಮಾ, ವಿದ್ಯಾರ್ಥಿನಿಯರ ಪೋಷಕರಾದ ನಂದಿತಾ ಕಾಮತ್, ವೇದಾನಂದ ಶೆಟ್ಟಿ,ಸಿಬ್ಬಂದಿ ಸುರೇಶ್, ರಮೇಶ್, ಸಬಿತ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
30/05/2022 12:54 pm