ಸುರತ್ಕಲ್: ಬಂಟರ ಸಂಘ(ರಿ.)ದ 22ನೇ ವಾರ್ಷಿಕ ಮಹಾಸಭೆ, ಅಭಿನಂದನೆ, ಭಿನ್ನ ಸಾಮರ್ಥ್ಯದವರಿಗೆ ಸಹಾಯಹಸ್ತ ಹಾಗೂ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ಸುರತ್ಕಲ್ ಬಂಟರ ಸಂಘದಲ್ಲಿ ನಡೆಯಿತು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತಾಡಿ "ಸುರತ್ಕಲ್ ಬಂಟರ ಸಂಘ ಬಹಳಷ್ಟು ಒಳ್ಳೆಯ ಕೆಲಸ ಮಾಡುತ್ತಾ ಬಂದಿದೆ. 25ನೇ ವರ್ಷದ ಹೊಸ್ತಿಲಲ್ಲಿರುವ ಸಂಘ ಇನ್ನಷ್ಟು ಸಮಾಜಮುಖಿ ಸೇವೆ ಮಾಡುತ್ತಾ ಸಮಾಜದ ನೊಂದವರ ಕಣ್ಣೀರು ಒರೆಸುವ ಕೆಲಸ ಮಾಡಲಿ ಎಂದರು.
ಮುಖ್ಯ ಅತಿಥಿಗಳಾದ. ವಿಕೆ ಸಮೂಹ ಸಂಸ್ಥೆ ಚೆಯರ್ ಮೆನ್ ಕರುಣಾಕರ ಎಂ. ಶೆಟ್ಟಿ, ಸವಣೂರು ವಿದ್ಯಾರಶ್ಮಿ ಸಮೂಹ ಸಂಸ್ಥೆಯ ಸಂಚಾಲಕ ಸವಣೂರು ಸೀತಾರಾಮ ರೈ ಮಾತನಾಡಿದರು.
ಕಾರ್ಯಕ್ರಮದಲ್ಲಿ ಮಧ್ಯಬೀಡು ದಿ. ರಾಘು ಸಿ. ಶೆಟ್ಟಿ ಸ್ಮರಣಾರ್ಥ 1 ಲಕ್ಷ ರೂ. ವಿದ್ಯಾರ್ಥಿ ವೇತನ, ಬಂಟರ ಸಂಘದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ, ತೋಕೂರು ಚಂದ್ರಶೇಖರ ಶೆಟ್ಟಿ ಹಾಗೂ ಮಧ್ಯ ಶಶಿಕಲಾ ಶೆಟ್ಟಿ ರವರಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟ, ಸುರತ್ಕಲ್ ಬಂಟರ ಸಂಘ ಹಾಗೂ ಮಧ್ಯಗುತ್ತು ಕರುಣಾಕರ ಶೆಟ್ಟಿ ಹಾಗೂ ದಾನಿಗಳ ಸಹಕಾರದೊಂದಿಗೆ ನಿರ್ಮಾಣಗೊಂಡಿರುವ ಮನೆಗಳ ಕೀಯನ್ನು ಹಸ್ತಾಂತರಿಸಲಾಯಿತು.
ಸವಣೂರು ಸೀತಾರಾಮ ರೈ ಹಾಗೂ ಐಕಳ ಹರೀಶ್ ಶೆಟ್ಟಿ ಸಾಧಕರ ನೆಲೆಯಲ್ಲಿ ಗೌರವಿಸಲಾಯಿತು.
ವೇದಿಕೆಯಲ್ಲಿ ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಸುಧಾಕರ್ ಎಸ್. ಪೂಂಜಾ,ವಸಂತ ಶೆಟ್ಟಿ, ಬಂಟ್ವಾಳ ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ್ ಶೆಟ್ಟಿ, ಬಾಬು ಶೆಟ್ಟಿ ಪೆರಾರ, ಸುರತ್ಕಲ್ ಬಂಟರ ಸಂಘದ ಸಾಂಸ್ಕೃತಿಕ ಕಾರ್ಯದರ್ಶಿ ಜಗನ್ನಾಥ ಶೆಟ್ಟಿ ಬಾಳ, ಉಪಾಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು, ಪ್ರಧಾನ ಕಾರ್ಯದರ್ಶಿ ಪ್ರವೀಣ್ ಪಿ. ಶೆಟ್ಟಿ, ಕಾರ್ಯಕಾರಿ ಸಮಿತಿ ಸದಸ್ಯ ಸುಭಾಷ್ಚಂದ್ರ ಶೆಟ್ಟಿ, ಕೋಶಾಧಿಕಾರಿ ರತ್ನಾಕರ್ ಶೆಟ್ಟಿ, ಮಹಿಳಾ ವೇದಿಕೆ ಅಧ್ಯಕ್ಷೆ ಚಿತ್ರಾ ಜೆ. ಶೆಟ್ಟಿ, ನಿಕಟಪೂರ್ವ ಅಧ್ಯಕ್ಷ ಉಲ್ಲಾಸ್ ಶೆಟ್ಟಿ, ಪುಷ್ಪರಾಜ್ ಶೆಟ್ಟಿ ಕುಡುಂಬೂರು ಉಪಸ್ಥಿತರಿದ್ದರು. ಸಂಘದ ಉಪಾಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು ಸ್ವಾಗತಿಸಿದರು.
Kshetra Samachara
05/06/2022 08:55 pm