ಕೈಕಂಬ: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಕೈಕಂಬ ಸಮೀಪದ ಶ್ರೀ ಕ್ಷೇತ್ರ ಪೆರಾರದಲ್ಲಿ ಬಂಟಕಂಬ ರಾಜಾಂಗಣ ಮತ್ತು ವ್ಯಾಘ್ರ ಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ನೂತನ ಬಂಟಕಂಬ ರಾಜಾಂಗಣಕ್ಕೆ ಕದಳೀ ಶ್ರೀ ಯೋಗೇಶ್ವರ ಮಠದ ರಾಜಯೋಗಿ ನಿರ್ಮಲನಾಥಜೀ ಮಹಾರಾಜ್ ಅವರ ದಿವ್ಯ ಉಪಸ್ಥಿತಿಯಲ್ಲಿ ಪಾದುಕಾನ್ಯಾಸ ಧಾರ್ಮಿಕ ವಿಧಿವಿಧಾನಗಳು ನಡೆದವು.
ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಶಾಸಕ ಡಾ.ಭರತ್ ಶೆಟ್ಟಿಯವರು ರಾಜಯೋಗಿಗಳನ್ನು ಸ್ವಾಗತಿಸಿ ಆರ್ಶೀವಾದ ಪಡೆದರು
ಕಾರ್ಯಕ್ರಮದಲ್ಲಿ ಮೂಲ್ಕಿ- ಮೂಡಬಿದ್ರೆ ಶಾಸಕರಾದ ಉಮಾನಾಥ ಕೋಟ್ಯಾನ್, ದೈವಸ್ಥಾನದ ಪ್ರಮುಖರು, ಗಣ್ಯರು, ಭಕ್ತರು ಉಪಸ್ಥಿತರಿದ್ದರು.
Kshetra Samachara
13/06/2022 11:59 am