ಮುಲ್ಕಿ;ದ.ಕ ಜಿಲ್ಲಾ ಪದ್ಮಶಾಲಿ ಮಹಾಸಭಾ ಅಮೃತ ಮಹೋತ್ಸವ ಸಮಿತಿ ವತಿಯಿಂದ ಪಡುಪಣಂಬೂರು ಸಮೀಪದ ಕಲ್ಲಾಪು ಶ್ರೀ ವೀರಭದ್ರ ಮಹಮ್ಮಾಯಿ ದೇವಸ್ಥಾನದಲ್ಲಿ "ಅಮೃತ ಸಂಭ್ರಮ- 2022" ಕಾರ್ಯಕ್ರಮ ನಡೆಯಿತು.
ಶಾಸಕ ಉಮಾನಾಥ್ ಕೋಟ್ಯಾನ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಅಮೃತ ಸಂಭ್ರಮ ಕಾರ್ಯಕ್ರಮದ ಮೂಲಕ ಸಂಘಟನೆಗಳನ್ನು ಒಗ್ಗೂಡಿಸುವ ಪ್ರಯತ್ನ ಶ್ಲಾಘನೀಯ ಎಂದರು.
ಈ ಸಂದರ್ಭ ಪಡುಪಣಂಬೂರು ಪಂಚಾಯತ್ ಸದಸ್ಯ ಹರಿಪ್ರಸಾದ್, ಪದ್ಮಶಾಲಿ ಸಭಾದ ಜಿಲ್ಲಾ ಅಧ್ಯಕ್ಷ ಜಯರಾಮ್,ಮಾಜೀ ಅಧ್ಯಕ್ಷ ಪುರಂದರ ಶೆಟ್ಟಿಗಾರ್, ಆಡಳಿತ ಮೊಕ್ತೇಸರ ಶಂಕರ್ ಶೆಟ್ಟಿಗಾರ್,ಎಚ್. ಎ. ಗೋಪಾಲ್,ಗುರಿಕಾರರು ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಇತ್ತೀಚೆಗೆ ಕಿನ್ನಿಗೋಳಿಯ ಹೊಸಕಾವೇರಿ ಶೆಟ್ಟಿ ಕಾಡು ಬಳಿ ನಿಧನರಾದ ಮೂವರು ಮಕ್ಕಳಿಗೆ ಶ್ರದ್ಧಾಂಜಲಿ ಅರ್ಪಿಸಿ ಮೌನ ಪ್ರಾರ್ಥನೆ ಸಲ್ಲಿಸಲಾಯಿತು. ಬಳಿಕ ಅಮೃತ ಸಂಭ್ರಮ ಕಾರ್ಯಕ್ರಮ ನಡೆಯಿತು.
Kshetra Samachara
26/06/2022 11:37 am