ಮುಲ್ಕಿ:ಸರಿಯಾದ ಸಲಹೆ ಸಹಕಾರದಿಂದ ಯಾವುದೇ ಸಂಘ ಸಂಸ್ಥೆಯನ್ನು ಭದ್ರಪಡಿಸಲು ಸಾದ್ಯ ಎಂದು ಮುಲ್ಕಿ ಬಂಟರ ಸಂಘದ ಗೌರವಾಧ್ಯಕ್ಷ ಸಂತೋಷ್ ಕುಮಾರ್ ಹೆಗ್ಡೆ ಹೇಳಿದರು ಅವರು ಮುಲ್ಕಿ ಬಂಟರ ಸಂಘದಲ್ಲಿ ನಡೆದ ಮಹಿಳಾ ವೇದಿಕೆಯ ಪ್ರಥಮ ಸಭೆಯನ್ನು ಉದ್ಘಾಟಿಸಿ ಮಾತನಾಡಿ ಮಹಿಳೆಯರು ಇಂದು ಎಲ್ಲಾ ಕ್ಷೇತ್ರದಲ್ಲಿ ಗುರುತಿಸಿಗೊಂಡಿದ್ದು ಮಹಿಳೆಯರಿಂದ ನಮ್ಮ ಸಂಸ್ಥೆಯನ್ನು ಗಟ್ಟಿಗೊಳಿಸಬಹುದು ಎಂದರು.
ಕಾರ್ಯಕ್ರಮದಲ್ಲಿ ಮುಲ್ಕಿ ಬಂಟರ ಸಂಘದ ಅಧ್ಯಕ್ಷ ಪುರುಶೋತ್ತಮ ಶೆಟ್ಟಿ, ಕಾರ್ಯದರ್ಶಿ ಗಂಗಾಧರ ಶೆಟ್ಟಿ, ಜೊತೆ ಕಾರ್ಯದರ್ಶಿ ಸಾಯಿನಾಥ ಶೆಟ್ಟಿ, ಮಹಿಳಾ ವಿಭಾಗದ ಸಂಚಾಲಕಿ ಚಂದ್ರಕಲಾ ಶೆಟ್ಟಿ, ಯುವ ವಿಭಾಗದ ಸಂಚಾಲಕ ದಾಮೋಧರ ಶೆಟ್ಟಿ, ಮಹಿಳಾ ವಿಭಾಗದ ಸ್ಥಾಪಕಾಧ್ಯಕ್ಷೆ ಸಾವಿತ್ರಿ ಶೆಟ್ಟಿ, ಶ್ರೀಶ ಸರಪ್ ಐಕಳ ಮತ್ತಿತರರು ಉಪಸ್ಥಿತರಿದ್ದರು. ಚಂದ್ರಕಲಾ ಶೆಟ್ಟಿ ಸ್ವಾಗತಿಸಿ, ಕುಸುಮಾ ರವೀಂದ್ರ ಶೆಟ್ಟಿ ಧನ್ಯವಾದ ಸಮರ್ಪಿಸಿದರು. ಅರ್ಪಿತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
Kshetra Samachara
26/06/2022 03:05 pm