ಮಂಗಳೂರು : ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ವಿಶ್ವಕರ್ಮ ಸಮಾಜವನ್ನು ಒಡೆಯುವ ಕೆಲಸ ಮಾಡಿಲ್ಲ ಎಂದು ವಿಶ್ವಕರ್ಮ ಒಕ್ಕೂಟ ಸ್ಪಷ್ಟಪಡಿಸಿದೆ.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ರವರನ್ನು ಮಂಗಳೂರು ಸರ್ಕ್ಯೂಟ್ ಹೌಸ್‌ನಲ್ಲಿ ಭೇಟಿ ಮಾಡಿದ ವಿಶ್ವಕರ್ಮ ನಿಯೋಗ, ವಿಶ್ವಕರ್ಮ ಅಭಿವೃದ್ಧಿ ನಿಗಮಕ್ಕೆ ಪ್ರತಿ ವರ್ಷ ರೂ. 500 ಕೋಟಿ ಅನುದಾನ ಒದಗಿಸಬೇಕು. ವಿಶ್ವಕರ್ಮ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬಾರದು ಎಂಬ ಮನವಿಯೊಂದಿಗೆ ವಿಶ್ವಕರ್ಮ ಸಮಾಜವನ್ನು ಒಡೆಯುವ ಪ್ರಯತ್ನವನ್ನು ಸಚಿವ ಶ್ರೀನಿವಾಸ ಪೂಜಾರಿ ಅವರು ಮಾಡಿಲ್ಲ. ಹೀಗಾಗಿ ಅವರ ವಿರುದ್ಧ ಯಾವುದೇ ಕ್ರಮ ಜರಗಿಸಬಾರದು ತಿಳಿಸಿದೆ.
ನಿಯೋಗದಲ್ಲಿ ವಿಶ್ವಕರ್ಮ ಒಕ್ಕೂಟದ ಅಧ್ಯಕ್ಷ ಮಧು ಆಚಾರ್ಯ, ಆನೆಗುಂದಿ ಸಂಸ್ಥಾನ ಸರಸ್ವತಿ ಪೀಠ ಪ್ರತಿಷ್ಠಾನದ ಅಧ್ಯಕ್ಷ ವಡೇರ ಹೋಬಳಿ ಶ್ರೀಧರ ಆಚಾರ್, ಮಂಗಳೂರು ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಕೇಶವ ಆಚಾರ್, ಉಪಳ್ಳಿ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತಸರ ಕಳಿ ಚಂದ್ರಯ್ಯ ಆಚಾರ್, ಒಕ್ಕೂಟದ ಮಾಜಿ ಅಧ್ಯಕ್ಷ ಅಲೆವೂರು ಯೋಗೀಶ ಆಚಾರ್, ಅಸೆಟ್‌ನ ನಿಕಟಪೂರ್ವ ಅಧ್ಯಕ್ಷ ತ್ರಾಸಿ ಸುಧಾಕರ ಆಚಾರ್, ಒಕ್ಕೂಟದ ವಸಂತ ಆಚಾರ್ ಮೊದಲಾದವರು ಇದ್ದರು ಮುಖ್ಯಮಂತ್ರಿ ಮತ್ತು ಇಲಾಖೆಯ ಮುಖ್ಯಸ್ಥರೊಂದಿಗೆ ಸಮಾಲೋಚಿಸಿ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ಕ್ರಮವಹಿಸುವುದಾಗಿ ನಳಿನ್ ಕುಮಾರ್ ಕಟೀಲ್ ಈ ವೇಳೆ ಭರವಸೆ ನೀಡಿದ್ದಾರೆ.
Kshetra Samachara
29/06/2022 05:50 pm