ಮುಲ್ಕಿ: ಹಳೆಯಂಗಡಿ ಸಮೀಪದ ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಮಗ್ರ ಜೀರ್ಣೋದ್ಧಾರದ ಅಂಗವಾಗಿ ವೇ.ಮೂ. ಶಿಬರೂರು ಗೋಪಾಲಕೃಷ್ಣ ತಂತ್ರಿಯವರ ನೇತೃತ್ವದಲ್ಲಿ ರಾತ್ರಿ ಶ್ರೀ ದುರ್ಗಾ ನಮಸ್ಕಾರ ಪೂಜೆ ನಡೆಯಿತು.
ಈ ಸಂದರ್ಭ ದೇವಸ್ಥಾನದ ಪ್ರಧಾನ ಅರ್ಚಕ ಮಧುಸೂದನ ಭಟ್, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹರಿದಾಸ್ ಭಟ್, ಸಮಿತಿ ಸದಸ್ಯರಾದ ಪುರುಷೋತ್ತಮ ರಾವ್, ವಿಪುಲ ಡಿ. ಶೆಟ್ಟಿಗಾರ್, ಜೀರ್ಣೋದ್ಧಾರ ಸಮಿತಿ ಸದಸ್ಯರಾದ ಸುಗಂಧಿ ಡಿ. ಕೊಂಡಾಣ, ಸಿಬ್ಬಂದಿವರ್ಗ, ಊರ ಪರವೂರ ಭಕ್ತರು ಉಪಸ್ಥಿತರಿದ್ದರು.
Kshetra Samachara
05/07/2022 10:36 am