ಮುಲ್ಕಿ: ಮುಲ್ಕಿ ಪ್ರೆಸ್ ಕ್ಲಬ್ ವತಿಯಿಂದ ಪತ್ರಿಕಾ ದಿನಾಚರಣೆ ಪುನರೂರು ಟೂರಿಸ್ಟ್ ಹೋಮ್ ಸಭಾಂಗಣದಲ್ಲಿ ನಡೆಯಿತು.
ವೇದಿಕೆಯಲ್ಲಿ ಕಸಾಪ ಮಾಜೀ ರಾಜ್ಯಾಧ್ಯಕ್ಷ ಡಾ. ಹರಿಕೃಷ್ಣ ಪುನರೂರು ಮಾತನಾಡಿ ಪತ್ರಕರ್ತರು ಲೇಖನಿಯ ಮೂಲಕ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಶ್ರಮಿಸುವ ಸಾಧಕರು ಎಂದರು.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶ್ರೀನಿವಾಸ ನಾಯಕ್ ಇಂದಾಜೆ ಮಾತನಾಡಿ ಮುಲ್ಕಿ ಪ್ರೆಸ್ ಕ್ಲಬ್ ಉತ್ತಮ ಕಾರ್ಯ ನಿರ್ವಹಿಸುತ್ತಿದ್ದು ಮುಂದಿನ ದಿನಗಳಲ್ಲಿ ಪತ್ರಕರ್ತರಿಗೆ ಸರಕಾರದ ಸವಲತ್ತುಗಳನ್ನು ಸಿಗಲು ಆದಷ್ಟು ಪ್ರಯತ್ನ ಪಡುತ್ತೇನೆ ಎಂದರು.
ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಮಾತನಾಡಿದರು ಕಾರ್ಯಕ್ರಮದಲ್ಲಿ ಪತ್ರಿಕಾ ವಿತರಕರಾದ ಜಗನ್ನಾಥ,ಪ. ಗೋ. ಪ್ರಶಸ್ತಿ ಪುರಸ್ಕೃತ ಮಿಥುನ್ ಕೊಡೆತ್ತೂರು, ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹರಿಪ್ರಸಾದ್ ನಂದಳಿಕೆ ರವರನ್ನು ಗೌರವಿಸಲಾಯಿತು.
ಮುಲ್ಕಿ ನ ಪಂ ಅಧ್ಯಕ್ಷ ಸುಭಾಷ್ ಶೆಟ್ಟಿ, ಅಧ್ಯಕ್ಷ ಸತೀಶ್ ಅಂಚನ್, ಸದಸ್ಯ ಯೋಗೀಶ್ ಕೋಟ್ಯಾನ್,ಕಿನ್ನಿಗೋಳಿ ರೋಟರಿ ಕ್ಲಬ್ ಅಧ್ಯಕ್ಷ ಸ್ವರಾಜ್ ಶೆಟ್ಟಿ, ಡಾ.ಹರಿಶ್ಚಂದ್ರ ಪಿ.ಸಾಲ್ಯಾನ್, ಮುಲ್ಕಿ ರೋಟರಿ ಕ್ಲಬ್ ಅಧ್ಯಕ್ಷ ಜೋವೀನ್ ಪ್ರಕಾಶ್ ಡಿಸೋಜ, ಮಾಜೀ ಅಧ್ಯಕ್ಷ ಶಿವರಾಂ ಜಿ ಅಮೀನ್, ಲ. ವೆಂಕಟೇಶ ಹೆಬ್ಬಾರ್, ಉದಯಕುಮಾರ್ ಶೆಟ್ಟಿ ಆದಿಧನ್ ಮುಲ್ಕಿ,ದಿನೇಶ್ ಶೆಟ್ಟಿ, ಉದ್ಯಮಿ ಜೀವನ್ ಶೆಟ್ಟಿ ಕಾರ್ನಾಡ್, ಯುವವಾಹಿನಿ ಕೇಂದ್ರ ಸಮಿತಿ ಉದಯ ಅಮೀನ್, ಸತೀಶ್ ಕಿಲ್ಪಾಡಿ ಹಿರಿಯ ಪತ್ರಕರ್ತ ಸರ್ವೋತ್ತಮ ಅಂಚನ್, ಮುಲ್ಕಿ ಪ್ರೆಸ್ ಕ್ಲಬ್ ಅಧ್ಯಕ್ಷ ನಿಶಾಂತ್ ಕಿಲೆಂಜೂರು, ಕಾರ್ಯದರ್ಶಿ ಪ್ರಕಾಶ್ ಸುವರ್ಣ, ಪುನೀತ್ ಕೃಷ್ಣ ಮತ್ತಿತರರು ಉಪಸ್ಥಿತರಿದ್ದರು . ಪತ್ರಕರ್ತರಾದ ಹರೀಶ್ ಹೆಜ್ಮಾಡಿ ಸ್ವಾಗತಿಸಿದರು, ಶರತ್ ಸಂಕಲಕರಿಯ ನಿರೂಪಿಸಿದರು
Kshetra Samachara
09/07/2022 11:12 am