ಮಂಗಳೂರು: ಕಲಾವಿದರ ಕಷ್ಟಗಳನ್ನು ಅರಿತು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಕೆಲಸ ಮಾಡುತ್ತಿದೆ. ಯಕ್ಷಗಾನ ಬೆಳೆಯಬೇಕು, ಕಲಾವಿದರು ಉಳಿಯ ಬೇಕು. ಈ ನಿಟ್ಟಿನಲ್ಲಿ ಪಟ್ಲ ಫೌಂಡೇಶನ್ ಟ್ರಸ್ಟ್ ಕಲಾವಿದರಿಗೆ ದಾರಿ ದೀಪವಾಗಲಿ. ರಾತ್ರಿ ಹೊತ್ತು ನಿದ್ದೆಗೆಟ್ಟು ರಂಗಸ್ಥಳದಲ್ಲಿ ಕುಣಿದಾಡುವ ಕಲಾವಿದರ ಯೋಗಕ್ಷೇಮ ವಿಚಾರಿಸುವ ಫೌಂಡೇಶನ್ ನ ಕಾರ್ಯ ಶ್ಲಾಘನೀಯ. ಕಲೆಗೆ ಬೆಲೆ ಕೊಟ್ಟು ಕಲಾವಿದರನ್ನು ಸಶಕ್ತರನ್ನಾಗಿಸುವ ಕೆಲಸ ಪಟ್ಲ ಫೌಂಡೇಶನ್ ಟ್ರಸ್ಟ್ ನಿಂದ ನಡೆಯಲಿ ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಗೌರವಾಧ್ಯಕ್ಷ, ಮುಂಬಯಿ ಹೇರಂಬ ಇಂಡಸ್ಟ್ರೀಸ್ ನ ಅಧ್ಯಕ್ಷ ಸದಾಶಿವ ಶೆಟ್ಟಿ ಕನ್ಯಾನ ಹೇಳಿದರು.
ಕಂಕನಾಡಿ ಗರೋಡಿ ಬಳಿಯ ಅಟ್ಟಣೆ ಹೊಟೇಲ್ ಸಭಾಂಗಣದಲ್ಲಿ ನಡೆದ ಯಕ್ಷಾಶ್ರಯ ಯೋಜನೆಯಡಿಯಲ್ಲಿ ನಾಲ್ವರು ಕಲಾವಿದರಿಗೆ ಮನೆ ಕಟ್ಟಲು ತಲಾ ರೂ.2 ಲಕ್ಷ ಸಹಾಯಧನ ನೀಡಿ ಮಾತನಾಡಿದರು.
ವೇದಿಕೆಯಲ್ಲಿದ್ದ ಪಟ್ಲ ಫೌಂಡೇಶನ್ ಟ್ರಸ್ಟ್ ನ ಪ್ರಧಾನ ಸಂಚಾಲಕ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಮಾತನಾಡಿ ಸಮಾಜ ಸೇವೆ ಎಂದಾಗ ಜಾತಿಯನ್ನು ಬದಿಗಿರಿಸಿ ಮನುಷ್ಯತ್ವ, ಪ್ರಾಮಾಣಿಕತೆಯಿಂದ ಕೆಲಸ ಮಾಡೋಣ ಎಂದರು
ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಮಾತನಾಡಿದರು.
ಕಮಲ ಶಿಲೆ ಮೇಳದ ಲಕ್ಷಣ ಭಂಡಾರಿ, ಮಾರಣಕಟ್ಟೆ ಮೇಳದ ತಿಮ್ಮಪ್ಪ ದೇವಾಡಿಗ, ಮಂದಾರ್ತಿ ಮೇಳದ ನರಸಿಂಹ ನಾಯಕ್ ಮತ್ತು ಪೊಳಲಿಯ ಚಂದ್ರಹಾಸ ಪೂಜಾರಿ ರವರಿಗೆ ಮನೆಕಟ್ಟಲು ತಲಾ ಎರಡು ಲಕ್ಷ ರೂಪಾಯಿಯನ್ನು ಹಸ್ತಾಂತರಿಸಲಾಯಿತು.
ವೇದಿಕೆಯಲ್ಲಿ ಟ್ರಸ್ಟ್ ನ ಕೋಶಾಧಿಕಾರಿ ಸಿಎ ಸುದೇಶ್ ಕುಮಾರ್ ರೈ, ಉಪಸ್ಥಿತರಿದ್ದರು.
ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ ಅಡ್ಯಾರ್ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ಉಪಾಧ್ಯಕ್ಷ ಡಾ.ಮನು ರಾವ್ ವಂದಿಸಿದರು.
Kshetra Samachara
10/07/2022 09:54 pm