ಮುಲ್ಕಿ:ತೋಕೂರು ಫೇಮಸ್ ಯೂತ್ ಕ್ಲಬ್ (ರಿ) ಮತ್ತು ಫೇಮಸ್ ಯೂತ್ ಕ್ಲಬ್ ಮಹಿಳಾ ಮಂಡಲದ ಜಂಟಿ ಆಶ್ರಯದಲ್ಲಿ ವನಮಹೋತ್ಸವ ಮತ್ತು ಪರಿಸರ ಜನಜಾಗೃತಿ ಕಾರ್ಯಕ್ರಮ ಫೇಮಸ್ ಯೂತ್ ಕ್ಲಬ್ ನ ಕಾರ್ಯಾಲಯದಲ್ಲಿ ನಡೆಯಿತು.
ಫೇಮಸ್ ಯೂತ್ ಕ್ಲಬ್ ನ ಗೌರವಾಧ್ಯಕ್ಷ ಗುರುರಾಜ್ ಎಸ್. ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ ಗಿಡ ಮರಗಳ ರಕ್ಷಣೆ ಮನುಷ್ಯನ ಉಸಿರಾಟದ ಒಂದು ಅಂಗವಾಗಿದೆ. ಮುಂದಿನ ದಿನಗಳಲ್ಲಿ ಮನುಷ್ಯ ಉಸಿರಾಡಬೇಕಾದರೆ ಪರಿಸರವನ್ನು ಪೋಷಿಸಿ ರಕ್ಷಿಸಬೇಕಾದುದು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯವಾಗಿದೆ ಎಂದರು.
ಮಂಗಳೂರು ನೆಹರು ಯುವ ಕೇಂದ್ರದ ಆಡಳಿತಾಧಿಕಾರಿ ಜಗದೀಶ ಕೆ., ಯುವ ಸಮನ್ವಯಾಧಿಕಾರ ರಘುವೀರ್ ಸೂಟರ್ ಪೇಟೆ ಮತ್ತು ಯುವ ಪ್ರತಿನಿಧಿ ಹಿತೇಶ್, ಜಿಲ್ಲಾ ಪಂ ಮಾಜೀ ಸದಸ್ಯ ವಿನೋದ್ ಕುಮಾರ್ ಬೊಳ್ಳೂರು ಸಸಿಗಳನ್ನು ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು.
ಯಕ್ಷ ದೇಗುಲ ಹತ್ತು ಸಮಸ್ತರು 10ನೇ ತೋಕೂರು ನ ನಿಕಟ ಪೂರ್ವ ಅಧ್ಯಕ್ಷ ಗಣೇಶ್ ಜಿ. ಬಂಗೇರ, ಫೇಮಸ್ ಯೂತ್ ಕ್ಲಬ್ಬಿನ ಅಧ್ಯಕ್ಷ ಭಾಸ್ಕರ್ ಅಮೀನ್ ತೋಕೂರು ಮತ್ತು ಮಹಿಳಾ ಮಂಡಲದ ಅಧ್ಯಕ್ಷೆ ಪ್ರೇಮಲತಾ ಯೋಗೀಶ್ ಉಪಸ್ಥಿತರಿದ್ದರು.
ಸಂಸ್ಥೆಯ ಕಾರ್ಯದರ್ಶಿ ಹಿಮಕರ್ ಕೋಟ್ಯಾನ್ ರವರು ಕಾರ್ಯಕ್ರಮ ನಿರೂಪಿಸಿದರು. ಬಳಿಕ ಗಿಡಗಳನ್ನು ವಿತರಿಸಲಾಯಿತು.
Kshetra Samachara
10/07/2022 10:15 pm