ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: ಭಜನೆಯಿಂದ ಲೋಕಕಲ್ಯಾಣ: ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ

ಮುಲ್ಕಿ: ಭಜನೆಯ ಮೂಲಕ ದೇವರನ್ನು ಆರಾಧಿಸಿ ಸತ್ಕರ್ಮಗಳಿಂದ ಲೋಕಕಲ್ಯಾಣ ಸಾಧ್ಯ ಎಂದು ಬೆಂಗಳೂರಿನ ಅಂತರಾಷ್ಟ್ರೀಯ ವಾಸ್ತು ತಜ್ಞ ಹಾಗೂ ವೈಜ್ಞಾನಿಕ ಜ್ಯೋತಿಷಿ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಹೇಳಿದರು.

ಅವರು ಮುಲ್ಕಿಯ ಒಳಲಂಕೆ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಕ್ಷೇತ್ರದ ಭಜನಾ ಮಂಡಳಿಯ 18ನೇ ವಾರ್ಷಿಕೋತ್ಸವದ ಪ್ರಯುಕ್ತ ನಡೆದ "ಏಕಾಹ ಭಜನಾ" ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಸಾದ ಸ್ವೀಕರಿಸಿ ಮಾತನಾಡಿದರು.

ದೇವಸ್ಥಾನದ ಅರ್ಚಕ ವೇ.ಮೂ. ಪದ್ಮನಾಭ ಭಟ್ ಕ್ಷೇತ್ರದ ವತಿಯಿಂದ ವಿಶೇಷ ಪ್ರಾರ್ಥನೆ ಸಲ್ಲಿಸಿ ಸ್ವಾಮಿಜಿಯವರಿಗೆ ಪ್ರಸಾದ ನೀಡಿ ಗೌರವಿಸಿದರು.

ಈ ಸಂದರ್ಭ ಮಾತೃಶ್ರೀ ಶಾರದಮ್ಮ, ಶ್ರೀಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದ ನಿರ್ದೇಶಕಿ ರಜನಿ ಸಿ ಭಟ್, ರಾಹುಲ್ ಸಿ ಭಟ್,ರಾಜೇಶ್ ಖನ್ನ ಭಟ್, ಸಂಚಾಲಕ ಪುನೀತ್ ಕೃಷ್ಣ, ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು, ಭಜನಾ ಮಂಡಳಿ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

11/07/2022 09:44 am

Cinque Terre

2.12 K

Cinque Terre

0

ಸಂಬಂಧಿತ ಸುದ್ದಿ