ಮುಲ್ಕಿ: ಹಳೆಯಂಗಡಿ ಸಮೀಪದ ತೋಕೂರು ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್(ರಿ) ಆಶ್ರಯದಲ್ಲಿ ವಿವಿಧ ಸಂಘ ಸಂಸ್ಥೆಗಳಿಗೆ ಕ್ರೀಡಾ ಸಾಮಾಗ್ರಿಗಳ ವಿತರಣಾ ಕಾರ್ಯಕ್ರಮ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಮುಲ್ಕಿ ಬಂಟರ ಸಂಘದ ಅಧ್ಯಕ್ಷ ಪುರುಷೋತ್ತಮ ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿದರು
ಕಾರ್ಯಕ್ರಮದ ಅಧ್ಯಕ್ಷತೆಯನ್ನು ನೆಹರು ಯುವ ಕೇಂದ್ರದ ದಕ್ಷಿಣ ಕನ್ನಡ ಜಿಲ್ಲಾ ಯುವ-ಅಧಿಕಾರಿ ರಘುವೀರ್ ಸೂಟರ್ ಪೇಟೆ ಮಾತನಾಡಿ ಸಂಘ ಸಂಸ್ಥೆಗಳ ಅಭಿವೃಧ್ಧಿಯಲ್ಲಿ ಯುವ ಜನತೆಯ ಪಾತ್ರ ಮುಖ್ಯ ಎಂದರು.
ನೆಹರು ಯುವ ಕೇಂದ್ರದ ಆಡಳಿತಾಧಿಕಾರಿ ಜಗದೀಶ್ ಕೆ ಮಾತನಾಡಿ ದೈಹಿಕ ಸಬಲತೆ ಕಾಪಾಡಿಕೊಳ್ಳುವ ದೃಷ್ಟಿಯಲ್ಲಿ ಕ್ರೀಡೆಗೆ ಪ್ರೋತ್ಸಾಹ ನೀಡಬೇಕು. ಈ ಬಗ್ಗೆ ನೆಹರು ಯುವ ಕೇಂದ್ರದಿಂದ ಕ್ರೀಡಾ ಸಾಮಾಗ್ರಿಗಳನ್ನು ವಿತರಿಸಿ ಸಂಪೂರ್ಣ ಸಹಕಾರ ನೀಡಲಾಗುತ್ತಿದೆ ಎಂದರು.
ಮುಲ್ಕಿತಹಶೀಲ್ದಾರ್ ಟಿ. ಜಿ. ಗುರುಪ್ರಸಾದ್ ರವರು ಕ್ರೀಡಾ ಸಮಾಗ್ರಿಗಳನ್ನು ಅರ್ಹ ಸಂಘ ಸಂಸ್ಥೆಗಳ ಪ್ರತಿನಿಧಿಗಳಿಗೆ ವಿತರಿಸಿ ಮಾತನಾಡಿದರು, ಸಂಸ್ಥೆಯ ಗೌರವ ಅಧ್ಯಕ್ಷ ಮೋಹನ್ ದಾಸ್ ಹಾಗೂ ಅಧ್ಯಕ್ಷ ಸಂತೋಷ್ ದೇವಾಡಿಗ,ಕಂದಾಯ ನಿರೀಕ್ಷಕ ದಿನೇಶ್, ನೆಹರು ಯುವ ಕೇಂದ್ರದ ಹಿತೇಶ್, ಗ್ರಾ ಪಂ ಸದಸ್ಯ ಹೇಮನಾಥ್ ಅಮೀನ್, ಸಂತೋಷ್ ಕುಮಾರ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಕಳೆದ 15 ವರ್ಷಗಳಿಂದ ಸಕ್ರಿಯವಾಗಿ ವಿಧ್ಯಾರ್ಥಿ ಸಂಘಟನೆಗಳೊಂದಿಗೆ ಹಾಗೂ ವಿವಿಧ ಸಂಘ ಸಂಸ್ಥೆಗಳೊಂದಿಗೆ ನಿಕಟವಾಗಿ ಬೆರೆತು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸುತ್ತಿರುವ ನೆಹರು ಯುವ ಕೇಂದ್ರದ ದಕ್ಷಿಣ ಕನ್ನಡ ಜಿಲ್ಲಾ ಯುವ-ಅಧಿಕಾರಿ ರಘುವೀರ್ ಸೂಟರ್ ಪೇಟೆ ರವರನ್ನ ಗೌರವಿಸಲಾಯಿತು.
ಪ್ರಧಾನ ಕಾರ್ಯದರ್ಶಿ ಜಗದೀಶ್ ಕುಲಾಲ್ ಧನ್ಯವಾದ ಅರ್ಪಿಸಿದರು ಕಾರ್ಯಾಧ್ಯಕ್ಷ ಸುರೇಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
Kshetra Samachara
12/07/2022 09:17 am