ಮುಲ್ಕಿ: ಭಕ್ತಿಯ ಮೂಲಕ ಭಗವಂತನ ಆರಾಧಿಸಿಕೊಂಡು ಸಾರ್ಥಕತೆ ಅಭಿನಂದನೀಯ ಎಂದು ಬೆಂಗಳೂರಿನ ಅಂತರಾಷ್ಟ್ರೀಯ ವಾಸ್ತು ತಜ್ಞ ಹಾಗೂ ವೈಜ್ಞಾನಿಕ ಜ್ಯೋತಿಷಿ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಹೇಳಿದರು.
ಅವರು ಮುಲ್ಕಿಯ ತಮ್ಮ ಆಶ್ರಮದಲ್ಲಿ ಕೊಲಕಾಡಿ ಶ್ರೀ ಶಿರಿಡಿ ಸಾಯಿಬಾಬಾ ಮಂದಿರದ ಕಾರ್ಯದರ್ಶಿ ಶ್ರೀಧರ ಕೋಟ್ಯಾನ್ ರವರನ್ನು ಆಶ್ರಮದ ವತಿಯಿಂದ ಸಾಧಕರ ನೆಲೆಯಲ್ಲಿ ಗೌರವಿಸಿ ಮಾತನಾಡಿದರು.
ಈ ಸಂದರ್ಭ ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದ ನಿರ್ದೇಶಕಿ ರಜನಿ ಸಿ ಭಟ್, ರಾಹುಲ್ ಸಿ ಭಟ್, ಸಂಚಾಲಕ ಪುನೀತ್ ಕೃಷ್ಣ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
12/07/2022 01:34 pm