ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: "ಶಿಕ್ಷಣ ಕ್ಷೇತ್ರದ ಸಾಧಕರನ್ನು ಗುರುತಿಸಿ ಗೌರವಿಸುವ ಕಾರ್ಯ ಅಭಿನಂದನೀಯ"

ಮುಲ್ಕಿ: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಸೌತ್ ಕೆನರಾ ಫೋಟೋಗ್ರಾಫರ್ ಎಸ್ಸೋಸಿಯೇಷನ್ ನ ಮುಲ್ಕಿ ವಲಯದ 18ನೇ ವಾರ್ಷಿಕ ಮಹಾಸಭೆ ಹಳೆಯಂಗಡಿಯ ಶ್ರೀ ವಿದ್ಯಾ ವಿನಾಯಕ ಯುವಕ ಮಂಡಲದ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಎಸ್ ಕೆ ಪಿ ಎ ಜಿಲ್ಲಾಧ್ಯಕ್ಷ ಆನಂದ ಬಂಟ್ವಾಳ ಮಾತನಾಡಿ ಛಾಯಾಗ್ರಾಹಕರು ಸಂಘಟನೆ ಮೂಲಕ ಸಾಮಾಜಿಕ ತತ್ವಗಳನ್ನು ಬೆಳೆಸಿಕೊಂಡು ಸಾಧನೆ ಶ್ಲಾಘನೀಯವಾಗಿದ್ದು ಶಿಕ್ಷಣ ಕ್ಷೇತ್ರದ ಸಾಧಕರನ್ನು ಗುರುತಿಸಿ ಗೌರವಿಸುವ ಕಾರ್ಯ ಅಭಿನಂದನೀಯ ಎಂದರು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ಕೆಪಿಎ ಮುಲ್ಕಿ ವಲಯದ ಅಧ್ಯಕ್ಷ ಶಿವರಾಮ ಎಸ್ ಸುವರ್ಣ ವಹಿಸಿದ್ದರು

ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಉಪಾಧ್ಯಕ್ಷ ಲೋಕೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ, ನಿತಿನ್ ಬೆಳುವಾಯಿ, ಸಾಂಸ್ಕೃತಿಕ ಕಾರ್ಯದರ್ಶಿ ನವೀನ್ ಕುಮಾರ್ ಕಟೀಲು, ಎಸ್ಕೆಪಿಎ ವಿವಿಧೋದ್ದೇಶ ಸಂಘದ ನಿರ್ದೇಶಕ ಮೋಹನ್ ರಾವ್, ನಿಕಟಪೂರ್ವ ಅಧ್ಯಕ್ಷ ನವೀನ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಶೈಕ್ಷಣಿಕ ಸಾಧಕರಾದ ಶ್ರೇಯ ಎಚ್ ಕೋಟ್ಯಾನ್, ಆದರ್ಶ ಆರ್ ಪೂಜಾರಿ, ಅನನ್ಯ, ವೈಷ್ಣವಿ, ಆಸ್ಮಿಯ ಆರ್ ಪೂಜಾರಿ ರವರನ್ನು ಸನ್ಮಾನಿಸಲಾಯಿತು.

ಅಧ್ಯಕ್ಷ ಶಿವರಾಮ ಎಸ್. ಸುವರ್ಣ ಸ್ವಾಗತಿಸಿದರು, ಕಾರ್ಯದರ್ಶಿ ಹರೀಶ್ ಪಿ ಕೋಟ್ಯಾನ್ ಧನ್ಯವಾದ ಅರ್ಪಿಸಿದರು, ಲೈನಲ್ ಪಿಂಟೋ ನಿರೂಪಿಸಿದರು.

Edited By : PublicNext Desk
Kshetra Samachara

Kshetra Samachara

19/07/2022 05:21 pm

Cinque Terre

1.82 K

Cinque Terre

0

ಸಂಬಂಧಿತ ಸುದ್ದಿ