ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: 'ನಾರಾಯಣ ಗುರುಗಳ ತತ್ವದ ಮೂಲಕ ಶಿಕ್ಷಣದ ಮಹತ್ವವನ್ನು ಯುವ ಜನಾಂಗಕ್ಕೆ ತಿಳಿಸುವಂತಾಗಿದೆ'

ಮುಲ್ಕಿ: ಭಾರತದ ಸಂತ ಸತ್ವಗಳ ಲೋಕಾರ್ಪಣೆಯಾಗುತ್ತಿದ್ದು ವಿದ್ಯಾರ್ಥಿಗಳ ಬಳಿಗೆ ನಾರಾಯಣ ಗುರುಗಳ ತತ್ವವನ್ನು ಕೊಂಡೊಯ್ಯುವ ಮೂಲಕ ಶಿಕ್ಷಣದ ಮಹತ್ವವನ್ನು ಯುವ ಜನಾಂಗಕ್ಕೆ ತಿಳಿಸುವಂತಾಗಿದೆ ಎಂದು ಶಿಕ್ಷಣ ತಜ್ಞ ಡಾ. ವಸಂತಕುಮಾರ್ ಹೇಳಿದರು.

ಅವರು ಮಂಗಳೂರು ವಿಶ್ವವಿದ್ಯಾನಿಲಯದ ಬ್ರಹ್ಮಶ್ರೀ ನಾರಾಯಣಗುರು ಅಧ್ಯಯನ ಪೀಠದ ವತಿಯಿಂದ ನಾರಾಯಣಗುರು ಶಿಕ್ಷಣ ಸಂಸ್ಥೆಯ ಸಹಯೋಗದಲ್ಲಿ ಮುಲ್ಕಿಯಲ್ಲಿ ನಡೆದ 2022ರ ಸರಣಿ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

ಸಮಾರಂಭದ ಅಧ್ಯಕ್ಷತೆಯನ್ನು ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಭಾಸ್ಕರ್ ಮುದ್ದು ಸಾಲ್ಯಾನ್ ವಹಿಸಿ ಮಾತನಾಡಿ ವಿಶ್ವವಿದ್ಯಾನಿಲಯವು ಗುರು ತತ್ವದ ಪ್ರಸರಣದ ಮೂಲಕ ಯುವ ಜನಾಂಗದ ಮನಸ್ಸು ಕಟ್ಟುವ ಕೆಲಸವನ್ನು ಮಾಡುತ್ತಿದೆ ಎಂದರು.

ಸಂಸ್ಥೆಯ ಸಂಚಾಲಕರಾದ ಎಚ್.ವಿ. ಕೋಟ್ಯಾನ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಬಿಲ್ಲವ ಮಹಾಮಂಡಲದ ಉಪಾಧ್ಯಕ್ಷರಾದ ಸೂರ್ಯಕಾಂತ್, ಕಾರ್ಯದರ್ಶಿ ವಿಜಯಕುಮಾರ್ ಕುಬೇವೂರು, ರಮೇಶ್ ಅಮೀನ್ ಕೊಕ್ಕರಕಲ್, ರಂಗಕರ್ಮಿ ಚಂದ್ರಶೇಖರ ಸುವರ್ಣ, ಸಂಸ್ಥೆಯ ಟ್ರಸ್ಟಿಗಳಾದ ಹರೀಂದ್ರ ಸುವರ್ಣ, ಹೇಮರಾಜ್, ಬಾಲಚಂದ್ರ ಸನಿಲ್, ಯೋಗೀಶ್ ಕೋಟ್ಯಾನ್ ಉಪಸ್ಥಿತರಿದ್ದರು. ಉಪನ್ಯಾಸಕರಾದ ಯತೀಶ್ ಅಮೀನ್ ಮತ್ತು ಕೇಶವ ರವರು ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಕಾರ್ಯಕ್ರಮವನ್ನು ನಡೆಸಿದರು. ಅಧ್ಯಯನ ಪೀಠದ ನಿರ್ದೇಶಕರಾದ ಡಾ. ಗಣೇಶ್ ಅಮೀನ್ ಸಂಕಮಾರ್ ಸ್ವಾಗತಿಸಿದರು. ಉಪನ್ಯಾಸಕ ರಮೇಶ್ ವಂದಿಸಿದರು

Edited By : PublicNext Desk
Kshetra Samachara

Kshetra Samachara

30/07/2022 06:35 pm

Cinque Terre

1.74 K

Cinque Terre

0

ಸಂಬಂಧಿತ ಸುದ್ದಿ