ಮುಲ್ಕಿ: ಪರಿಸರದ ಹಲವೆಡೆ ಹಲವು ಶುಕ್ರವಾರ ವರಮಹಾಲಕ್ಷ್ಮಿ ವೃತ ವಿಜೃಂಭಣೆಯಿಂದ ಆಚರಿಸಲಾಯಿತು ಮುಲ್ಕಿ ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಭವನದಲ್ಲಿ ಅರ್ಚಕ ಶ್ರೀಪತಿ ಉಪಾಧ್ಯಾಯರ ನೇತೃತ್ವದಲ್ಲಿ ವರಮಹಾಲಕ್ಷ್ಮಿ ವ್ರತ ಪೂಜೆ ವಿಜೃಂಭಣೆಯಿಂದ ನಡೆಯಿತು.
ಮುಲ್ಕಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ, ಕೊಲಕಾಡಿ ಶ್ರೀ ಕಾಳಿಕಾಂಬ ದೇವಸ್ಥಾನದಲ್ಲಿ, ಮುಲ್ಕಿ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ, ಪಡುಪಣಂಬೂರು ನಾಲ್ಕೂರು ಪಂಜುರ್ಲಿ ದೈವಸ್ಥಾನದಲ್ಲಿ, ಕಟೀಲು ಮಲ್ಲಿಗೆಯಂಗಡಿ ನಂದಿನಿ ಮಹಿಳಾ ಮಂಡಳಿ, ಕಿನ್ನಿಗೊಳಿ ಅತ್ತೂರು ಅರಸು ಕುಂಜಿರಾಯ ದೈವಸ್ಥಾನ, ಎಸ್ಕೋಡಿ ಕುಲಾಲ ಸಂಘ, ಕಟೀಲು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ, ಕಿನ್ನಿಗೋಳಿ ಕಾಳಿಕಾಂಬ ಮಹಿಳಾ ವೃಂದ ಮತ್ತಿತರ ಕಡೆಗಳಲ್ಲಿ ವರ ಮಹಾಲಕ್ಷ್ಮಿ ವೃತವನ್ನು ಆಚರಿಸಲಾಯಿತು.
ವರಮಹಾಲಕ್ಷ್ಮಿ ಪೂಜೆ ಹೆಸರೇ ಸೂಚಿಸುವಂತೆ ಲಕ್ಷ್ಮಿದೇವಿಯನ್ನು ಪೂಜಿಸುವ ದಿನ. ಶ್ರಾವಣ ಮಾಸದ ಶುಕ್ಷ ಪಕ್ಷದ ಶುಕ್ರವಾರನ್ನು ವರಮಹಾಲಕ್ಷ್ಮಿ ದಿನ ಎಂದು ಕರೆಯುವುದುಂಟು. ವರಮಹಾಲಕ್ಷ್ಮಿ ಹಬ್ಬ ಆಚರಣೆ ಇತ್ತೀಚಿನ ದಿನಗಳಲ್ಲಿ ಹೆಚ್ಚು ಶ್ರೇಷ್ಠತೆ ಪಡೆದುಕೊಳ್ಳುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಪ್ರತೀಯೊಬ್ಬ ಗೃಹಿಣಿಯೂ ವರಮಹಾಲಕ್ಷ್ಮಿ ಹಬ್ಬವನ್ನು ಆಚರಿಸಲು ಮುಂದಾಗುತ್ತಿದ್ದಾರೆ. ವರಮಹಾಲಕ್ಷ್ಮಿ ಹಬ್ಬ ಆಚರಣೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಲೇ ಇದೆ.
ನಮ್ಮ ಇಷ್ಟಾರ್ಥಗಳನ್ನು ಈಡೇರಿಸುವ ಸಲುವಾಗಿ. ಲಕ್ಷ್ಮಿಪೂಜೆಯನ್ನು ಮಾಡಬೇಕು. ಪ್ರತಿಯೊಂದು ಪೂಜೆಗೂ ಒಂದಲ್ಲ ಒಂದು ರೀತಿಯ ನಿಯಮ ಹಾಗೂ ಪದ್ಧತಿ ಇರುತ್ತದೆ. ಹಾಗೆಯೇ ಲಕ್ಷ್ಮಿ ಪೂಜೆಗೂ ನಿಯಮಗಳಿದ್ದು, ಅವುಗಳನ್ನು ಪಾಲಿಸಿ ಪೂಜೆ ಮಾಡಿದರೆ ಇಷ್ಟಾರ್ಥಗಳನ್ನು ಪೂರೈಸಿಕೊಳ್ಳಬಹುದು ಎಂದು ಹಿರಿಯರು ಹೇಳುತ್ತಾರೆ.
Kshetra Samachara
05/08/2022 03:41 pm