ಮುಲ್ಕಿ: ನಗರ ಪಂಚಾಯತ್ ವ್ಯಾಪ್ತಿಯ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಿದ್ಧತೆಯ ಪೂರ್ವಭಾವಿ ಸಭೆ ಶಾಸಕ ಉಮಾನಾಥ ಕೋಟ್ಯಾನ್ ನೇತೃತ್ವದಲ್ಲಿ ಕಾರ್ನಾಡ್ ಸಮುದಾಯ ಭವನದಲ್ಲಿ ನಡೆಯಿತು.
ಈ ಸಂದರ್ಭ ಶಾಸಕ ಉಮಾನಾಥ ಕೋಟ್ಯಾನ್ ಮಾತನಾಡಿ ಅಗಸ್ಟ್ 14ರಂದು ಮುಲ್ಕಿ ಮೂಡಬಿದ್ರೆ ಕ್ಷೇತ್ರದಲ್ಲಿ ಬೃಹತ್ ತಿರಂಗ ಯಾತ್ರೆ ನಡೆಯಲಿದ್ದು ಬೆಳಿಗ್ಗೆ ಎಂಟು ಗಂಟೆಗೆ ಬಪ್ಪನಾಡು, ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಿಂದ 100 ಮೀಟರ್ ಉದ್ದದ ಬೃಹತ್ ರಾಷ್ಟ್ರಧ್ವಜವನ್ನು ದೇಶಭಕ್ತ ಕಾರ್ಯಕರ್ತರ ಮೂಲಕ ತಿರಂಗಾ ಯಾತ್ರೆ ಪ್ರಾಣಿ ಅಬ್ಬಕ್ಕನ ಹುಟ್ಟೂರಾದ ಮೂಡಬಿದ್ರೆಯವರೆಗೆ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ರಾಜಕೀಯ ಮರೆತು ಎಲ್ಲಾ ಸಂಘ-ಸಂಸ್ಥೆಗಳು ಸೇರಿ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಲ್ಕಿ ನಪಂ ಅಧ್ಯಕ್ಷ ಸುಭಾಶ್ ಶೆಟ್ಟಿ ವಹಿಸಿದ್ದರು.
ವೇದಿಕೆಯಲ್ಲಿ ನ ಪಂ ಉಪಾಧ್ಯಕ್ಷ ಸತೀಶ್ ಅಂಚನ್, ಸ್ಥಾಯಿ ಸಮಿತಿ ಅಧ್ಯಕ್ಷೆ ಲಕ್ಷ್ಮಿ, ಸರಕಾರಿ ಆಸ್ಪತ್ರೆಯ ವೈದ್ಯರಾದ ಡಾ. ಕೃಷ್ಣ, ಮುಲ್ಕಿ ಠಾಣಾ ಇನ್ಸ್ಪೆಕ್ಟರ್ ಕುಸುಮಾಧರ, ಉಪ ತಹಶಿಲ್ದಾರ್ ದಿಲೀಪ್ ರೋಡ್ಕರ್ ಮತ್ತಿತರರು ಉಪಸ್ಥಿತರಿದ್ದರು.
ಸಭೆಯಲ್ಲಿ ನ ಪಂ ಮುಖ್ಯಾಧಿಕಾರಿ ಚಂದ್ರ ಪೂಜಾರಿ ನಗರ ಪಂಚಾಯತ್ ವ್ಯಾಪ್ತಿಯ ಸ್ವಾತಂತ್ರ್ಯೋತ್ಸವದ ಕಾರ್ಯಕ್ರಮಗಳ ಬಗ್ಗೆ ಬಗ್ಗೆ ಮಾಹಿತಿ ನೀಡಿದರು.
Kshetra Samachara
12/08/2022 06:11 pm