ಮುಲ್ಕಿ:ಲಯನ್ಸ್ ಕ್ಲಬ್ ಬಪ್ಪನಾಡು ಇಸ್ಪೈರ್ ಲಯನ್ಸ್ ಕ್ಲಬ್ ಮುಚ್ಚೂರು ನೀರುಡೆ, ಪ್ರಜ್ಞಾ ಸಲಹಾ ಕೇಂದ್ರ ಸಹಯೋಗದೊಂದಿಗೆ ಮಹಿಳಾ ಸಬಲೀಕರಣ ಕಾರ್ಯಕ್ರಮದ ಅಡಿಯಲ್ಲಿ ಮಹಿಳೆಯರಿಗೆ ಪ್ಲಾಸ್ಟಿಕ್ ಬುಟ್ಟಿ ಹೆಣೆಯುವ ಮೂರು ದಿನದ ತರಬೇತಿ ಕಾರ್ಯಕ್ರಮ ಮುಲ್ಕಿಯ ನಾರಾಯಣ ಗುರು ಸಭಾಭವನದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಬಪ್ಪನಾಡು ಲಯನ್ಸ್ ಕ್ಲಬ್ ಅಧ್ಯಕ್ಷ ವೆಂಕಟೇಶ ಹೆಬ್ಬಾರ್ ಉದ್ಘಾಟಿಸಿ ಮಾತನಾಡಿ ಮಹಿಳೆಯರ ಸಬಲೀಕರಣದ ಮೂಲಕ ಸಮಾಜದಲ್ಲಿ ಪ್ರತಿಯೊಂದು ಕಾರ್ಯಕ್ರಮದಲ್ಲಿ ಮಹಿಳೆಯರು ಭಾಗವಹಿಸಿ ರಾಷ್ಟ್ರದ ಭದ್ರತೆಯಲ್ಲಿ ಪ್ರಧಾನ ಪಾತ್ರವಹಿಸಬೇಕು ಎಂಬ ನಿಟ್ಟಿನಲ್ಲಿ ಲಯನ್ಸ್ ಕ್ಲಬ್ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದರು.
ವೇದಿಕೆಯಲ್ಲಿ ಲ.ಪ್ರತಿಭಾ ಹೆಬ್ಬಾರ್, ಮುಚ್ಚೂರು ನೀರುಡೆ ಲಯನ್ಸ್ ಕ್ಲಬ್ ಉಪಾಧ್ಯಕ್ಷ ರೋಶನ್, ಪ್ರಜ್ಞಾ ಸಲಹಾ ಕೇಂದ್ರದ ವಿಲಿಯಂ ಡಿಸೋಜಾ, ಪ್ರದೀಪ್, ಹರಿಣಾರಾವ್ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸುಮಾರು 30 ಮಹಿಳೆಯರು ತರಬೇತಿಯನ್ನು ಪಡೆಯುತ್ತಿದ್ದು ಶಿಬಿರಾರ್ಥಿಗಳಿಗೆ ಲಯನ್ಸ್ ಕ್ಲಬ್ ಬಪ್ಪನಾಡು ಇಸ್ಪೈರ್ ವತಿಯಿಂದ ಸ್ವತಂತ್ರೋತ್ಸವದ 75ನೇ ಅಮೃತ ಮಹೋತ್ಸವ ಕಾರ್ಯಕ್ರಮದ ಪ್ರಯುಕ್ತ ಅರ್ ಘರ್ ತಿರಂಗ ಕಾರ್ಯಕ್ರಮದ ಅಂಗವಾಗಿ ರಾಷ್ಟ್ರಧ್ವಜವನ್ನು ವಿತರಿಸಲಾಯಿತು.
Kshetra Samachara
13/08/2022 08:31 am