ಮುಲ್ಕಿ: ದೇವಸ್ಯ ಮಠ ನಿರಂತರ ದಾರ್ಮಿಕ ಚಟುವಟಿಕೆಗಳಲ್ಲಿ ತೊಡಗಿಕೊಂಡು ಮಕ್ಕಳ ಚಟುವಟಿಕೆಗಳಿಗೆ ಪ್ರೋತ್ಸಾಹ ಅಭಿನಂದನೀಯ ಎಂದು ಕಟೀಲು ದೇವಳ ಅನುವಂಶಿಕ ಅರ್ಚಕ ಲಕ್ಷೀನಾರಾಯಣ ಆಸ್ರಣ್ಣ ಹೇಳಿದರು.
ಅವರು ಕಿನ್ನಿಗೋಳಿ ಸಮೀಪದ ಕೊಡೆತ್ತೂರು ದೇವಸ್ಯ ಮಠದಲ್ಲಿ ನಡೆದ ಕೃಷ್ಣ ವೇಷ ಸ್ಪರ್ದೆಯನ್ನು ಉದ್ಘಾಟಿಸಿ ಮಾತನಾಡಿದರು.
ಕಿನ್ನಿಗೋಳಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಸಾಯಿಶ್ ಚೌಟ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಸಂದರ್ಭ ಕೊಡೆತ್ತೂರು ಅರಸುಕುಂಜರಾಯ ದೈವಸ್ಥಾನದ ಜಯರಾಮ ಮುಕಾಲ್ದಿ, ನಂದಿನಿ ಬ್ರಾಹ್ಮಣ ಸಭಾದ ಅಧ್ಯಕ್ಷ ಪದ್ಮನಾಭ ಭಟ್, ಕೊಡೆತ್ತೂರುಗುತ್ತು ದೇವಸ್ಯದ ನಿತಿನ್ ಶೆಟ್ಟಿ, ಇನರ್ ವೀಲ್ ಅಧ್ಯಕ್ಷೆ ರೇಷ್ಮಾ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಕಾರ್ತಿಕೇಯ ಉಡುಪ ಸ್ವಾಗತಿಸಿ, ಸುಧಾ ಉಡುಪ ನಿರೂಪಿಸಿದರು. ವೇದವ್ಯಾಸ ಉಡುಪ ಕಾರ್ಯಕ್ರಮ ನಿರೂಪಿಸಿದರು. ಒಟ್ಟು ನಾಲ್ಕು ವಿಭಾಗಗಳಲ್ಲಿ ನಡೆದ ಸ್ಪರ್ದೆಯಲ್ಲಿ ಸುಮಾರು 100 ಅಧಿಕ ಸ್ಪರ್ದೆಯಲ್ಲಿ ಭಾಗವಹಿಸಿದರು.
Kshetra Samachara
14/08/2022 01:14 pm