ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: ಸೀಮೆಯ ಅರಮನೆಗೆ ರಾಜ್ಯಸಭಾ ಸದಸ್ಯ ಡಾ. ವೀರೇಂದ್ರ ಹೆಗ್ಗಡೆ ಭೇಟಿ

ಮುಲ್ಕಿ: ಇಲ್ಲಿಗೆ ಸಮೀಪದ ಪಡುಪಣಂಬೂರಿನ ಮುಲ್ಕಿ ಸೀಮೆಯ ಅರಮನೆಗೆ ಪದ್ಮವಿಭೂಷಣ ರಾಜ್ಯಸಭಾ ಸದಸ್ಯ ರಾಜಶ್ರೀ ಡಾ. ಡಿ. ವೀರೇಂದ್ರ ಹೆಗ್ಗಡೆ ಭೇಟಿ ನೀಡಿದರು.

ಇದೇ ಸಂದರ್ಭದಲ್ಲಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು ಸೀಮೆಯ ವತಿಯಿಂದ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದ ಡಾ ಹೆಗ್ಗಡೆಯವರನ್ನು ಅಭಿನಂದಿಸಿ ಗೌರವಿಸಿದರು.

ಇದೇ ಸಂದರ್ಭ ಡಾ. ವೀರೇಂದ್ರ ಹೆಗ್ಗಡೆ ಯವರು ಅರಮನೆಯ ಸಾಮಾಜಿಕ ಚಟುವಟಿಕೆಗಳನ್ನು ಶ್ಲಾಘಿಸಿ ಕಾರ್ಯಕ್ರಮಗಳು ನಿರಂತರವಾಗಿರಲಿ ಎಂದು ಶುಭ ಹಾರೈಸಿದರು. ಮುಲ್ಕಿ ಅರಮನೆಯ ಗೌತಮ್ ಜೈನ್, ಆಶಾಲತಾ, ರಕ್ಷಾ, ಪವಿತ್ರೆಶ್ ಮತ್ತಿತರರು ಉಪಸ್ಥಿತರಿದ್ದರು

Edited By : PublicNext Desk
Kshetra Samachara

Kshetra Samachara

27/08/2022 12:24 pm

Cinque Terre

1.07 K

Cinque Terre

0

ಸಂಬಂಧಿತ ಸುದ್ದಿ