ಮುಲ್ಕಿ: ಇಲ್ಲಿಗೆ ಸಮೀಪದ ಶಿಮಂತೂರು ಶ್ರೀ ಆದಿ ಜನಾರ್ಧನ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಶ್ರೀ ಆದಿ ಜನಾರ್ಧನ ಸೇವಾ ಯುವಕ ಮಂಡಲದ ವತಿಯಿಂದ ಗ್ರಾಮೀಣ ಸ್ಪರ್ಧೆಗಳು ನಡೆದು ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವಕ ಮಂಡಲದ ಅಧ್ಯಕ್ಷ ಕಿಶೋರ್ ಶೆಟ್ಟಿ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಅತಿಕಾರಿಬೆಟ್ಟು ಗ್ರಾಪಂ ಅಧ್ಯಕ್ಷ ಮನೋಹರ ಕೋಟ್ಯಾನ್ ಮಾತನಾಡಿ ಗ್ರಾಮೀಣ ಕ್ರೀಡೆಗಳಿಗೆ ಪ್ರೋತ್ಸಾಹ ನೀಡಿ ಒಗ್ಗಟ್ಟು ಮೂಡಿಸುವ ಯುವಕ ಮಂಡಲದ ಕಾರ್ಯವೈಖರಿ ಶ್ಲಾಘನೀಯ ಎಂದರು.
ವೇದಿಕೆಯಲ್ಲಿ ಕಿಲ್ಪಾಡಿ ಗ್ರಾಮ ಪಂಚಾಯತ್ ಸದಸ್ಯೆ ಮಮತಾ ಶೆಟ್ಟಿ, ಸೀತಾರಾಮ ಭಟ್, ಮುಲ್ಕಿ ವಿಜಯ ರೈತ ಸೊಸೈಟಿ ಅಧ್ಯಕ್ಷ ರಂಗನಾಥ ಶೆಟ್ಟಿ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ದಿನೇಶ್ಚಂದ್ರ ಅಜಿಲ, ಹರೀಶ್ ಶೆಟ್ಟಿ, ಯುವಕ ಮಂಡಲದ ಉಪಾಧ್ಯಕ್ಷ ಪ್ರವೀಣ್, ಭುಜಂಗ ಆರ್ ಶೆಟ್ಟಿ ಶಿಮಂತೂರು ಮತ್ತಿತರರು ಉಪಸ್ಥಿತರಿದ್ದರು. ಗೋಪಾಲ್ ಶಿಮಂತೂರು ನಿರೂಪಿಸಿದರು.
Kshetra Samachara
31/08/2022 07:59 pm