ಮುಲ್ಕಿ: ಇತಿಹಾಸ ಪ್ರಸಿದ್ಧ ಪಾವಂಜೆ ಶ್ರೀ ಮಹಾಲಿಂಗೇಶ್ವರ ಮಹಾ ಗಣಪತಿ ದೇವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ಸೇವಾ ಕೌಂಟರ್ ಗೆ ಹಿರಿಯ ವಿದ್ವಾಂಸರಾದ ಕೃಷ್ಣ ಭಟ್ ಹಾಗೂ ಶಾಸಕ ಉಮಾನಾಥ ಕೋಟ್ಯಾನ್ ದೀಪ ಬೆಳಗಿಸಿ ಚಾಲನೆ ನೀಡಿದರು
ಈ ಸಂದರ್ಭ ಅವರು ಮಾತನಾಡಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಕ್ತರ ಹಾಗೂ ದಾನಿಗಳ ಸಹಕಾರ ಮುಖ್ಯವಾಗಿದ್ದು ಯಶಸ್ವಿಯಾಗಿ ನಡೆಯಲಿ ಎಂದು ಹಾರೈಸಿದರು.
ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು ಶುಭ ಹಾರೈಸಿದರು. ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯ ಚಂದ್ರಶೇಖರ್ ನಾನಿಲ್ ಮಾತನಾಡಿ ಈಗಾಗಲೇ ಶಾಸಕರು ದೇವಸ್ಥಾನದ ಜೀರ್ಣೋದ್ಧಾರಕ್ಕೆ ಸರಕಾರದಿಂದ 50 ಲಕ್ಷ ಅನುದಾನದ ಭರವಸೆ ನೀಡಿದ್ದಾರೆ ಎಂದರು.
ಅರ್ಚಕ ವೇ.ಮೂ. ಗಣೇಶ್ ಭಟ್, ವಾಸುದೇವ ಭಟ್, ಪವಿತ್ರ ಪಾಣಿ ಗಣೇಶ್ ಭಟ್, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸೂರ್ಯ ಕುಮಾರ್, ಸಮಿತಿಯ ಸದಸ್ಯರು, ಪಿಸಿಎ ಬ್ಯಾಂಕ್ ಅಧ್ಯಕ್ಷ ಸತೀಶ್ ಭಟ್,ಗುರುರಾಜ ಭಟ್ ಪಾವಂಜೆ,ಎಸ್.ಕೆ. ಪಿ. ಎ ನ ಮೋಹನ್ ರಾವ್ ಪಾವಂಜೆ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
01/09/2022 10:40 am