ಮುಲ್ಕಿ: ಮುಲ್ಕಿ ಬಂಟರ ಸಂಘದ ವತಿಯಿಂದ 2022 23ನೇ ಸಾಲಿನ ವಿದ್ಯಾರ್ಥಿ ವೇತನ ಪ್ರತಿಭಾ ಪುರಸ್ಕಾರ, ಮುಲ್ಕಿ ಸುಂದರರಾಮ ಶೆಟ್ಟಿ ಪ್ರಶಸ್ತಿ ಪ್ರಧಾನ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಮುಲ್ಕಿ ಬಂಟರ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಮುಂಬೈ ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಲ್ಕಿ ಬಂಟರ ಸಂಘದ ಅಧ್ಯಕ್ಷ ಪುರುಷೋತ್ತಮಶೆಟ್ಟಿ , ಮುಖ್ಯ ಅತಿಥಿಗಳಾಗಿ ಬೆಂಗಳೂರು ಬಂಟರ ಸಂಘದ ಅಧ್ಯಕ್ಷ ಮುರಳಿಧರ ಹೆಗ್ಡೆ, ಮುಲ್ಕಿ ಬಂಟರ ಸಂಘದ ಗೌರವಾಧ್ಯಕ್ಷ ಸಂತೋಷ್ ಕುಮಾರ್ ಹೆಗ್ಡೆ ಸೇರಿದಂತೆ ಮತ್ತಿತರರು ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ 2022ರ ಮುಲ್ಕಿ ಸುಂದರರಾಮ ಶೆಟ್ಟಿ ಪ್ರಶಸ್ತಿಯನ್ನು ಜಾಗತಿಕ ಬಂಟರ ಸಂಘದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ರವರಿಗೆ ನೀಡಲಾಗುವುದು ಹಾಗೂ ದ.ಕ. ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಕೆ ಪಿ ಸುಚರಿತಶೆಟ್ಟಿ ರವರನ್ನು ಗೌರವಿಸಲಾಗುವುದು. 2022 23ನೇ ಸಾಲಿನ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿವೇತನ ನೀಡಲಾಗುವುದು ಎಂದು ಮುಲ್ಕಿ ಬಂಟರ ಸಂಘದ ಪ್ರಕಟಣೆ ತಿಳಿಸಿದೆ.
Kshetra Samachara
03/09/2022 10:30 pm