ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: "ಎಳವೆಯಲ್ಲಿ ಮಕ್ಕಳನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು": ಡಾ.ಹರಿಕೃಷ್ಣ ಪುನರೂರು

ಮುಲ್ಕಿ: ಮುಲ್ಕಿ ಲಯನ್ಸ್ ಕ್ಲಬ್, ಲಿಯೋ ಕ್ಲಬ್ ಹಾಗೂ ಕಟ್ಟಡ ಸಮಿತಿಯ ವತಿಯಿಂದ ಶಿಕ್ಷಕರ ದಿನಾಚರಣೆ ಹಾಗೂ ನೂತನ ಲಯನ್ಸ್ ಸುವರ್ಣ ಸೌಧ ಕಟ್ಟಡದ ಉದ್ಘಾಟನಾ ಸಮಾರಂಭ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಟ್ಟಡ ಸಮಿತಿಯ ಅಧ್ಯಕ್ಷ ಹರೀಶ್ ಪುತ್ರನ್ ವಹಿಸಿದ್ದರು

ಮುಖ್ಯ ಅತಿಥಿಗಳಾಗಿ ಮಾಜೀ ಜಿಲ್ಲಾ ಗವರ್ನರ್ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಮಾತನಾಡಿ ಎಳವೆಯಲ್ಲಿ ಮಕ್ಕಳನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸುವಲ್ಲಿ ಗುರುಗಳ ಪಾತ್ರ ಮಹತ್ವದ್ದಾಗಿದ್ದು ಗುರುವೆಂದರೆ ವ್ಯಕ್ತಿಯಲ್ಲ ಅಜ್ಞಾನದ ಕತ್ತಲನ್ನು ಕಳೆದು ಸುಜ್ಞಾನದ ಬೆಳಕಿನೆಡೆಗೆ ಕೊಂಡೊಯ್ಯುವ ಶಕ್ತಿ ಎಂದರು.

ಲಯನ್ಸ್ ಜಿಲ್ಲಾ ಗವರ್ನರ್ ಸಂಜೀತ್ ಶೆಟ್ಟಿ ,ಮುಲ್ಕಿ ಲಯನ್ಸ್ ಕ್ಲಬ್ ಅಧ್ಯಕ್ಷೆ ನೀರಜಾಕ್ಷಿ ಅಗರ್ ವಾಲ್, ಕಾರ್ಯದರ್ಶಿ ಶೀತಲ್ ಸುಶೀಲ್, ಕಟ್ಟಡ ಸಮಿತಿಯ ಕೋಶಾಧಿಕಾರಿ ಸದಾಶಿವ ಹೊಸದುರ್ಗ, ಮಾಜೀ ಅಧ್ಯಕ್ಷ ವಿನೋದ್ ಸಾಲ್ಯಾನ್, ಧನಂಜಯ ಮಟ್ಟು,ಲಿಯೋ ಜಿಲ್ಲಾಧ್ಯಕ್ಷ ಕವನ್ ಕುಬೆವೂರು,ಮುಲ್ಕಿ ಲಿಯೋ ಅಧ್ಯಕ್ಷ ಪ್ರಯುಶ್ ಎಚ್ ಸುವರ್ಣ, ಸೃಜನ್ ಎಚ್ ಪುತ್ರನ್, ಕಿಶೋರ್ ಶೆಟ್ಟಿ ಬಪ್ಪನಾಡು,ಉದಯ ಅಮೀನ್ ಮಟ್ಟು ಮತ್ತಿತರರು ಉಪಸ್ಥಿತರಿದ್ದರು.

ನಿವೃತ್ತ ಉಪನ್ಯಾಸಕರಾದ ವೈ.ಎನ್. ಸಾಲ್ಯಾನ್, ಸ್ಯಾಮ್ ಮಾಬೆನ್, ವಿವಿಧ ಕ್ಷೇತ್ರಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ ನಿವೃತ್ತ ಹೊಲಿಗೆ ಶಿಕ್ಷಕಿಯರಾದ ಮತ್ತು ಸರೋಜಿನಿ ಸುವರ್ಣ,ನಯನ ಸೋನ್ಸ್ ರವರನ್ನು ಗೌರವಿಸಲಾಯಿತು.

Edited By : PublicNext Desk
Kshetra Samachara

Kshetra Samachara

05/09/2022 11:37 am

Cinque Terre

1.08 K

Cinque Terre

0

ಸಂಬಂಧಿತ ಸುದ್ದಿ