ಪುತ್ತೂರು: ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿಯವರ 168 ನೇ ಜನ್ಮ ದಿನಾಚರಣೆಯನ್ನು ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಬಿಲ್ಲವ ಸಂಘದ ಆಶ್ರಯದಲ್ಲಿ ಸೆಪ್ಟೆಂಬರ್ 10 ರಂದು ಪುತ್ತೂರು ನಾರಾಯಣ ಗುರುಸ್ವಾಮಿ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪುತ್ತೂರು ಬಿಲ್ಲವ ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ ಹೇಳಿದರು.
ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕಾರ್ಯಕ್ರಮದಂದು ವಿವಿಧ ಜಾತಿಯ ಮುಖಂಡರನ್ನು ಅಭಿನಂದಿಸಲಾಗುವುದು. ಸಮಾಜದ ಪ್ರತಿಭೆಗಳನ್ನು ಸನ್ಮಾನಿಸುವ ಕಾರ್ಯಕ್ರಮವನ್ನೂ ಸಮಾರಂಭದಲ್ಲಿ ಜೋಡಿಸಿಕೊಳ್ಳಲಾಗಿದ್ದು, ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಸಮಾಜದ ಐವರು ಗಣ್ಯರೂ ಈ ಸನ್ಮಾನ ಸ್ವೀಕರಿಸಲಿರುವರು ಎಂದು ಅವರು ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದರು.
Kshetra Samachara
07/09/2022 02:59 pm