ಮುಲ್ಕಿ:ಅನಾರೋಗ್ಯ ಪೀಡಿತ ಯಕ್ಷಗಾನ ದಿಗ್ಗಜ ಗಣೇಶ್ ಕೊಲಕಾಡಿ ರವರ ಚಿಕಿತ್ಸೆಗೆ ಕರ್ನಾಟಕ ರಾಜ್ಯ ಕನ್ನಡ ಸಂಸ್ಕೃತಿ ಇಲಾಖೆ ಹಾಗು ಇಂಧನ ಸಚಿವ ಸುನಿಲ್ ಕುಮಾರ್ ಸುಮಾರು ಒಂದು ಲಕ್ಷ ವೈಯುಕ್ತಿಕ ಸಹಾಯ ಹಸ್ತ ನೀಡಿ ಮಾದರಿಯಾಗಿದ್ದಾರೆ.
ಕರ್ನಾಟಕ ಯಕ್ಷಗಾನ ಅಕಾಡಮಿಯವರ 2022 ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿ ಮತ್ತು ಒಂದು ಲಕ್ಷ ನಗದು ಪುರಸ್ಕಾರ ನೀಡುವ ಸಂದರ್ಭದಲ್ಲಿ ಧನ ಮತ್ತು ಕನ್ನಡ ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ತಮ್ಮ ವೈಯಕ್ತಿಕ ಒಂದು ಲಕ್ಷದ ಚೆಕ್ ನ್ನು ಅತಿಕಾರಿಬೆಟ್ಟು ಪಂಚಾಯತ್ ಅಧ್ಯಕ್ಷ ಮನೋಹರ್ ಕೋಟ್ಯಾನ್ ಮೂಲಕ ನೀಡಿದ್ದಾರೆ.
ಈ ಸಂದರ್ಭ ಶಾಸಕ ಉಮಾನಾಥ ಕೋಟ್ಯಾನ್, ಕಿಲ್ಪಾಡಿ ಗ್ರಾಪಂ ಉಪಾಧ್ಯಕ್ಷ ಗೋಪಿನಾಥ ಪಡಂಗ , ಗಿರಿಧರ ಕಾಮತ್ ಕೆದುಬರಿ,ಆಕಾಡೆಮಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಗೂ ಬಿಜೆಪಿ ಮಂಡಲ ಅಧ್ಯಕ್ಷ ಸುನಿಲ್ ಆಳ್ವ, ಯುವ ವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಉದಯ ಅಮೀನ್ ಮಟ್ಟು ಮತ್ತಿತರರು ಉಪ್ಥಿತರಿದ್ದರು.
Kshetra Samachara
11/09/2022 08:15 am