ಮುಲ್ಕಿ: ಇತಿಹಾಸ ಪ್ರಸಿದ್ಧ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ಶಾಸಕ ಉಮಾನಾಥ ಕೋಟ್ಯಾನ್ ಉದ್ಘಾಟಿಸಿ ಮಾತನಾಡಿ ಭಕ್ತಿ ಭಾವದಿಂದ ನವದುರ್ಗೆಯರ ಆರಾಧನೆ ಮೂಲಕ ಜೀವನದಲ್ಲಿ ಸಂತೃಪ್ತಿ ಸಾಧ್ಯ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಷೇತ್ರದ ಅನುವಂಶಿಕ ಮೊಕ್ತೇಸರ ದುಗ್ಗಣ್ಣ ಸಾವಂತರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಧಾರ್ಮಿಕ ಪರಿಷತ್ ಸದಸ್ಯ ಭುವನಾಭಿರಾಮ ಉಡುಪ, ಮುಲ್ಕಿ ನಪಂ ಅಧ್ಯಕ್ಷ ಸುಭಾಶ್ ಶೆಟ್ಟಿ, ಅಳದಂಗಡಿ ಸತ್ಯದೇವತೆ ದೈವಸ್ಥಾನದ ಆಡಳಿತದಾರರಾದ ಶಿವಪ್ರಸಾದ್ ಅಜಿಲ, ಆಡಳಿತ ಮೊಕ್ತೇಸರ ಮನೋಹರ ಶೆಟ್ಟಿ, ಜೀರ್ಣೋದ್ಧಾರ ಸಮಿತಿಯ ಕಾರ್ಯದರ್ಶಿ ಸುನಿಲ್ ಆಳ್ವ, ಕಾರ್ಯನಿರ್ವಹಣಾಧಿಕಾರಿ ಜಯಮ್ಮ, ವಿದುಷಿ ಸುಮಂಗಲ ರತ್ನಾಕರ್, ಪ್ರಸಾದ್ ಭಟ್ ಮತ್ತಿತರರು ಉಪಸ್ಥಿತರಿದ್ದರು. ಲಕ್ಷ್ಮಿಕಾಂತ್ ನಿರೂಪಿಸಿದರು.
ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.
Kshetra Samachara
26/09/2022 07:27 pm