ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸೆ.29, 30ರಂದು 21ನೇ ಪುತ್ತೂರು ತಾಲೂಕು ಸಾಹಿತ್ಯ ಸಮ್ಮೇಳನ, ಸಮ್ಮೇಳನಾಧ್ಯಕ್ಷರಾಗಿ ಡಾ.ಶ್ರೀಧರ್. ಹೆಚ್.ಜಿ ಆಯ್ಕೆ

ಪುತ್ತೂರು: ತಾಲೂಕು 21ನೇ ಕನ್ನಡ ಸಾಹಿತ್ಯ ಸಮ್ಮೇಳನ ಸೆಪ್ಟೆಂಬರ್ 29 ಮತ್ತು 30 ರಂದು ಪುತ್ತೂರಿನ ಅಂಬಿಕಾ ವಿದ್ಯಾಸಂಸ್ಥೆಯಲ್ಲಿ ನಡೆಯಲಿದ್ದು, ಡಾ. ಶ್ರೀಧರ್. ಎಚ್.ಜಿ ಸಮ್ಮೇಳನಾಧ್ಯಕ್ಷತೆಯನ್ನು ವಹಿಸಲಿದ್ದಾರೆ ಎಂದು ಪುತ್ತೂರು ತಾಲೂಕು ಕ.ಸಾ.ಪ ಅಧ್ಯಕ್ಷ ಉಮೇಶ್ ನಾಯಕ್ ಹೇಳಿದರು.

ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಸೆಪ್ಟೆಂಬರ್ 29 ಬೆಳಿಗ್ಗೆ 9 ಗಂಟೆಗೆ ಪುತ್ತೂರು ನಗರಸಭಾ ಅಧ್ಯಕ್ಷ ಜೀವಂಧರ್ ಜೈನ್ ಧ್ವಜಾರೋಹಣ ನೆರವೇರಿಸಲಿದ್ದಾರೆ ಎಂದ ಅವರು ಮಧ್ಯಾಹ್ನ 2 ಗಂಟೆಗೆ ಪುತ್ತೂರು ಮಹಾಲಿಂಗೇಶ್ವರ ದೇವಳದ ವಠಾರದಿಂದ ಸಮ್ಮೇಳನ ನಡೆಯುವ ಅಂಬಿಕಾ ವಿದ್ಯಾಲಯದ ಸಭಾಂಗಣಕ್ಕೆ ಕನ್ನಡ ಭುವನೇಶ್ವರಿಯ ಮೆರವಣಿಗೆ ವಿವಿಧ ಕಲಾತಂಡಗಳೊಂದಿಗೆ ನಡೆಯಲಿದೆ ಎಂದರು.

ಸಮ್ಮೇಳನವನ್ನು ಕ.ಸಾ.ಪ ರಾಜ್ಯಾಧ್ಯಕ್ಷ ಡಾ.ಮಹೇಶ್ ಜೋಷಿ ಉದ್ಘಾಟಿಸಲಿದ್ದು, ಸ್ಮರಣ ಸಂಚಿಕೆಯನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ನೆರವೇರಿಸಲಿದ್ದಾರೆ. ಸೆಪ್ಟೆಂಬರ್ 30 ರಂದು ಯುವಜನತೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಯುವ ಸಮಾವೇಶ, ವಿಚಾರಗೋಷ್ಟಿ ನಡೆಯಲಿದೆ.ಸಮ್ಮೇಶನದಲ್ಲಿ 5 ಕೃತಿಗಳ ಲೋಕಾರ್ಪಣೆ, ಹಲವು ಸಾಧಕರಿಗೆ ಸನ್ಮಾನ, ಕವಿಗೋಷ್ಠಿ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದರು.

Edited By : PublicNext Desk
Kshetra Samachara

Kshetra Samachara

27/09/2022 12:43 pm

Cinque Terre

1.27 K

Cinque Terre

0

ಸಂಬಂಧಿತ ಸುದ್ದಿ