ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ:ಉತ್ತಮ ಸಮಾಜವನ್ನು ಬೆಳೆಸಲು ಶಿಕ್ಷಕರ ಪಾತ್ರ ಮಹತ್ವದ್ದು: ಫಮೀದ ಬೇಗಂ

ಮುಲ್ಕಿ: ರೋಟರಿ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಲ್ಕಿ ರೋಟರಿ ಕ್ಲಬ್ ಅಧ್ಯಕ್ಷ ಜೋವಿನ್ ಪ್ರಕಾಶ್ ಡಿಸೋಜ ವಹಿಸಿದ್ದರು.

ಮುಖ್ಯ ಅತಿಥಿಯಾಗಿ ವಿಜಯ ಪಿಯು ಕಾಲೇಜು ಪ್ರಿನ್ಸಿಪಾಲ್ ಫಮಿದಾ ಬೇಗಂ ವಹಿಸಿ ಮಾತನಾಡಿ ಶಿಕ್ಷಕರು ವಿದ್ಯಾರ್ಥಿ ಜೀವನದ ಗುರುಗಳಾಗಿದ್ದು ವಿದ್ಯಾರ್ಥಿಗಳಿಗೆ ಎಳವೆಯಲ್ಲಿ ಉತ್ತಮ ಶಿಕ್ಷಣ ನೀಡಿ ದೇಶದ ಉತ್ತಮ ಪ್ರಜೆಯನ್ನಾಗಿ ಮಾಡುವ ವ್ಯಕ್ತಿತ್ವವಿದೆ ಎಂದರು

ವೇದಿಕೆಯಲ್ಲಿ ಮುಲ್ಕಿ ರೋಟರಿ ಕ್ಲಬ್ ಕಾರ್ಯದರ್ಶಿ ಭುಜಂಗ ಕವತ್ತಾರು, ನಿರ್ದೇಶಕ ರವಿಚಂದ್ರ, ನಿಕಟ ಪೂರ್ವ ಅಧ್ಯಕ್ಷ ಶಿವರಾಮ್ ಜಿ ಅಮೀನ್, ಅಶೋಕ್ ಕುಮಾರ್ ಶೆಟ್ಟಿ, ಜಿನರಾಜ್ ಸಾಲ್ಯಾನ್, ನಿವೃತ್ತ ಪ್ರಾಂಶುಪಾಲ ವೈ ಎನ್ ಸಾಲ್ಯಾನ್ ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿವೃತ್ತ ಉಪನಿರ್ದೇಶಕರಾದ ವಿಷ್ಣುಮೂರ್ತಿ ಹಾಗೂ ಕಾರ್ನಾಡ್ ಸಿ ಎಸ್ ಐ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯಿನಿ ಉಮಾವತಿ ರವರನ್ನು ಗೌರವಿಸಲಾಯಿತು. ರಾಜಾ ಪತ್ರಾವೊ ನಿರೂಪಿಸಿದರು.

Edited By : PublicNext Desk
Kshetra Samachara

Kshetra Samachara

28/09/2022 08:06 pm

Cinque Terre

1.99 K

Cinque Terre

0

ಸಂಬಂಧಿತ ಸುದ್ದಿ