ಪುತ್ತೂರು: ಕರ್ನಾಟಕ ಸರ್ಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ಡಾ| ಶಿವರಾಮ ಕಾರಂತ ಬಾಲವನ, ಪರ್ಲಡ್ಕ, ಸುತ್ತೂರು, ಸಹಾಯಕ ಆಯುಕ್ತರ ಕಾರ್ಯಾಲಯ ಪುತ್ತೂರು ಇದರ ವತಿಯಿಂದ ಪ್ರತಿ ವರ್ಷ ಕೊಡಮಾಡುವ ಡಾ. ಶಿವರಾಮ ಕಾರಂತ ಬಾಲವನ ಪ್ರಶಸ್ತಿ:-2022ಕ್ಕೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ಹೆಗ್ಗೋಡಿನ ಹಿರಿಯ ರಂಗ ನಿರ್ದೇಶಕರಾದ ಅಕ್ಷರ ಕೆ.ವಿ. ಆಯ್ಕೆಯಾಗಿದ್ದಾರೆ .
ಬಾಲವನ ಪ್ರಶಸ್ತಿ 2022ರ ಆಯ್ಕೆ ಸಮಿತಿಯ ಅಧ್ಯಕ್ಷರಾದ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಸಂಜೀವ ಮಠಂದೂರು ಮತ್ತು ಆಯ್ಕೆ ಸಮಿತಿಯ ಪದನಿಮಿತ್ತ ಕಾರ್ಯದರ್ಶಿಗಳು, ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್, ಎಂ ರವರು ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.
Kshetra Samachara
01/10/2022 04:26 pm