ಮುಲ್ಕಿ: ಹಳೆಯಂಗಡಿ ಸಮೀಪದ ತೋಕೂರು ಮಹಿಳಾ ಮಂಡಲ ರಜತಮಹೋತ್ಸವದ ಉದ್ಘಾಟನಾ ಸಮಾರಂಭ ಲಾಂಛನ ಮತ್ತು ಮನವಿ ಪತ್ರ ಬಿಡುಗಡೆ ಸಮಾರಂಭ ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಕಟೀಲು ಕ್ಷೇತ್ರದ ಅರ್ಚಕರಾದ ಅನಂತಪದ್ಮನಾಭ ಆಸ್ರಣ್ಣ ಉದ್ಘಾಟಿಸಿ ಆಶೀರ್ವಚನ ನೀಡಿ ಸೇವಾ ಮನೋಭಾವದ ಮೂಲಕ ಸಂಘಟನೆಗಳು ಸಮಾಜಮುಖಿಯಾಗಿ ಬೆಳೆಯಲಿ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುರತ್ಕಲ್ ಜೆ ಸಿ ಐ ಅಧ್ಯಕ್ಷೆ ರಾಜೇಶ್ವರಿ ಶೆಟ್ಟಿ ವಹಿಸಿ ಲಾಂಛನ ಬಿಡುಗಡೆ ಮಾಡಿ ಮಾತನಾಡಿದರು
ಮಂಗಳೂರು ನೆಹರೂ ಯುವ ಕೇಂದ್ರದ ಯುವ ಸಮನ್ವಯ ಅಧಿಕಾರಿ ರಘುವೀರ್ ಸೂಟರ್ ಪೇಟೆ ಮನವಿ ಪತ್ರ ಬಿಡುಗಡೆ ಮಾಡಿದರು.
ಪಡುಪಣಂಬೂರು ಗ್ರಾಪಂ ಅಧ್ಯಕ್ಷೆ ಮಂಜುಳಾ,ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರಿದಾಸ ಭಟ್,ತೋಕೂರು ಯುವಕ ಸಂಘದ ಅಧ್ಯಕ್ಷ ಶೇಖರ್ ಶೆಟ್ಟಿಗಾರ್, ಮಹಿಳಾ ಸಂಘದ ಅಧ್ಯಕ್ಷೆ ಅನುಪಮಾ ಎ ರಾವ್, ಗೌರವಾಧ್ಯಕ್ಷೆ ಯಶೋಧ ಪಿ ರಾವ್, ಪ್ರಧಾನ ಕಾರ್ಯದರ್ಶಿ ಪ್ರಮೀಳಾ ಡಿ ಶೆಟ್ಟಿ, ಕೋಶಾಧಿಕಾರಿ ಪ್ರಿಯದರ್ಶಿನಿ ಉಪಸ್ಥಿತರಿದ್ದರು. ವಿನೋದ ಭಟ್, ಹೇಮನಾಥ ಅಮೀನ್ ನಿರೂಪಿಸಿದರು.
Kshetra Samachara
02/10/2022 12:05 pm