ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಪ್ಪನಾಡು: ಲೋಕಕಲ್ಯಾಣಕ್ಕಾಗಿ ಸಾಮೂಹಿಕ ಕುಂಕುಮಾರ್ಚನೆ

ಮುಲ್ಕಿ: ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಆಯುಕ್ತರ ಆದೇಶದಂತೆ ಇತಿಹಾಸ ಪ್ರಸಿದ್ಧ ಮುಲ್ಕಿ ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಲೋಕಕಲ್ಯಾಣಕ್ಕಾಗಿ ಸಾಮೂಹಿಕ ಕುಂಕುಮಾರ್ಚನೆ ಕಾರ್ಯಕ್ರಮ ನಡೆಯಿತು

ದೇವಸ್ಥಾನದ ಅರ್ಚಕ ಶ್ರೀಪತಿ ಉಪಾಧ್ಯಾಯ ವಿಶೇಷ ಪ್ರಾರ್ಥನೆ ಸಲ್ಲಿಸಿ ಮಾತನಾಡಿ ಶರನ್ನವರಾತ್ರಿಯ ಪರ್ವಕಾಲದಲ್ಲಿ ಕುಂಕುಮಾರ್ಚನೆ ಮೂಲಕ ಭಕ್ತರಿಗೆ ಸಕಲ ಇಷ್ಟಾರ್ಥ ಸಿದ್ಧಿ ಲಭಿಸಿ ಲೋಕಕಲ್ಯಾಣವಾಗಿ ಶಾಂತಿ ನೆಲೆಸಲಿ ಎಂದರು.

ಈ ಸಂದರ್ಭ ದೇವಸ್ಥಾನದ ಅರ್ಚಕ ನರಸಿಂಹ ಭಟ್, ಧಾರ್ಮಿಕ ಪರಿಷತ್ ಸದಸ್ಯ ಭುವನಾಭಿರಾಮ ಉಡುಪ ಅನುವಂಶಿಕ ಮೊಕ್ತೇಸರ ದುಗ್ಗಣ್ಣ ಸಾವಂತರು, ಆಡಳಿತ ಮೊಕ್ತೇಸರ ಮನೋಹರ ಶೆಟ್ಟಿ, ಅಭಿವೃದ್ಧಿ ಸಮಿತಿ ಅಧ್ಯಕ್ಷ ನಾರಾಯಣಶೆಟ್ಟಿ, ಪದಾಧಿಕಾರಿಗಳಾದ ಸುನಿಲ್ ಆಳ್ವ, ಉದಯ ಶೆಟ್ಟಿ, ಮುರಳಿಧರ ಭಂಡಾರಿ, ಕಾರ್ಯನಿರ್ವಹಣಾಧಿಕಾರಿ ಜಯಮ್ಮ ಮತ್ತಿತರರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

03/10/2022 08:21 pm

Cinque Terre

1.15 K

Cinque Terre

0

ಸಂಬಂಧಿತ ಸುದ್ದಿ