ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಾವಂಜೆ :ಶ್ರೀ ಕ್ಷೇತ್ರದ ಮೇಳಕ್ಕೆ ಸ್ವರ್ಣ ಕಿರೀಟ ಸಮರ್ಪಣೆ

ಮುಲ್ಕಿ: ಹಳೆಯಂಗಡಿ ಸಮೀಪದ ಪಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ನಾಗವೃಜ ಕ್ಷೇತ್ರದ ಮೇಳಕ್ಕೆ ಸ್ವರ್ಣ ಕಿರೀಟ ಸಮರ್ಪಣೆ ಸಮಾರಂಭವು ವಿಜಯ ದಶಮಿಯ ದಿನದಂದು ಶ್ರೀ ಕ್ಷೇತ್ರದಲ್ಲಿ ನಡೆಯಿತು.

ದಾನಿಗಳಾದ ಕನ್ಯಾನ ಕೂಳೂರು ಸದಾಶಿವ ಶೆಟ್ಟಿ ರವರು ಶ್ರೀ ಕ್ಷೇತ್ರದ ಮೇಳಕ್ಕೆ ಸ್ವರ್ಣ ಕಿರೀಟ ಸಮರ್ಪಿಸಿದರು.

ಬೆಳಿಗ್ಗೆ 8 ಗಂಟೆಗೆ ಶ್ರೀ ಕ್ಷೇತ್ರದಲ್ಲಿ ಚಂಡಿಕಾ ಹವನ, ವೈದಿಕ ವಿಧಿವಿಧಾನ,ಮಧ್ಯಾಹ್ನ ಸಭಾ ಕಾರ್ಯಕ್ರಮದಲ್ಲಿ ವೇದೋಕ್ತ ಸಂಮಾನ ನಡೆಯಿತು.

ಈ ಸಂದರ್ಭ ಜಾಗತಿಕ ಬಂಟರ ಸಂಘದ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಕರ್ನೀರೆ ವಿಶ್ವನಾಥ ಶೆಟ್ಟಿ, ಉದ್ಯಮಿ ಶಶಿಧರ ಶೆಟ್ಟಿ ಬರೋಡ, ಪಾವಂಜೆ ಶ್ರೀ ಜ್ಞಾನ ಶಕ್ತಿ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮೊಕ್ತೇಸರ ಶಶಿಂದ್ರ ಕುಮಾರ್, ಯಾಜೀ ನಿರಂಜನ ಭಟ್, ಭುಜಬಲಿ ಧರ್ಮಸ್ಥಳ, ಗುರುಪುರ ಗೋಳಿ ದಡಿ ಗುತ್ತು ವರ್ಧಮಾನ ಶೆಟ್ಟಿ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು. ಮಧ್ಯಾಹ್ನ ಅನ್ನ ಸಂತರ್ಪಣೆ ಬಳಿಕ ಪಟ್ಲ ಸತೀಶ ಶೆಟ್ಟಿ ಸಾರಥ್ಯದಲ್ಲಿ ಶ್ರೀ ಪಾವಂಜೆ ಮೇಳದವರಿಂದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ‌ ಬಯಲಾಟ ನಡೆಯಿತು.

Edited By : PublicNext Desk
Kshetra Samachara

Kshetra Samachara

05/10/2022 02:14 pm

Cinque Terre

1.8 K

Cinque Terre

0

ಸಂಬಂಧಿತ ಸುದ್ದಿ