ಮುಲ್ಕಿ: ಹಳೆಯಂಗಡಿ ಸಮೀಪದ ಪಡು ಪಣಂಬೂರು ಕಲ್ಲಾಪು ಶ್ರೀ ವೀರಭದ್ರ ಮಹಾಮ್ಮಾಯಿ ವಾಚನಾಲಯ ಮತ್ತು ಯುವಕ ಮಂಡಲ ಹಾಗೂ ಮಹಿಳಾ ವೇದಿಕೆ ವತಿಯಿಂದ ದೇವಸ್ಥಾನದ ಸಭಾಭವನದಲ್ಲಿ ಸಾಧಕರಿಗೆ ಗೌರವ ಕಾರ್ಯಕ್ರಮ ನಡೆಯಿತು
ಕಾರ್ಯಕ್ರಮದಲ್ಲಿ ಕುಣಿತ ಭಜನೆ ತರಗತಿಯ ಶಿಕ್ಷಕಿ ಪುಷ್ಪಲತಾ ರಾಜೇಶ್ ಶೆಟ್ಟಿಗಾರ್ ಹಾಗೂ ನೃತ್ಯ ಶಿಕ್ಷಕಿ ಶ್ವೇತಾ ವೆಂಕಟೇಶ್ ರ ಗೌರವಿಸಲಾಯಿತು. ಈ ಸಂದರ್ಭ ಕ್ಷೇತ್ರದ ರತ್ನಾಕರ್ ಶೆಟ್ಟಿಗಾರ್ ಯಾನೆ ಕಾಂತಣ್ಣ, ಅಪ್ಪು ಲಕ್ಷ್ಮಣ ಗುರಿಕಾರರು, ಆಡಳಿತ ಮಂಡಳಿಯ ಅಧ್ಯಕ್ಷ ಶಂಕರ್ ಶೆಟ್ಟಿಗಾರ್, ಯುವಕಮಂಡಲದ ಅಧ್ಯಕ್ಷ ನವೀನ್ ಶೆಟ್ಟಿಗಾರ್, ಕಾರ್ಯದರ್ಶಿ ರಿತೇಶ್ ಶೆಟ್ಟಿಗಾರ್, ಮಹಿಳಾ ವೇದಿಕೆಯ ಅಧ್ಯಕ್ಷೆ ಭಾರತಿ ಉಪಸ್ಥಿತರಿದ್ದರು
Kshetra Samachara
06/10/2022 05:51 pm