ಮಂಗಳೂರು: ಪದವಿ ಹಾಗೂ ಸ್ನಾತಕೋತ್ತರ ಪದವಿ ತರಗತಿ ನ. 17ರಿಂದ ಆರಂಭಗೊಳ್ಳಲಿವೆ ಎಂದು ದ.ಕ. ಜಿಲ್ಲಾ ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪ ತಿಳಿಸಿದ್ದಾರೆ.
ಅವರು ಶುಕ್ರವಾರ ದ.ಕ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೊರೊನಾ ಹಿನ್ನೆಲೆಯಲ್ಲಿ ಎಲ್ಲಾ ಖಾಸಗಿ, ಸರಕಾರಿ ಕಾಲೇಜು ಶೈಕ್ಷಣಿಕ ಚಟುವಟಿಕೆ ಪ್ರಾರಂಭಿಸುವ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮಂಗಳೂರು ವಿವಿ ವ್ಯಾಪ್ತಿಯಲ್ಲಿ ಬರುವ ಅಂತಿಮ ವರ್ಷದ ಪದವಿ, ಸ್ನಾತಕೋತ್ತರ ಪದವಿ ತರಗತಿ ನ.17ರಿಂದ ಸರಕಾರದ ಮಾರ್ಗಸೂಚಿ ಪಾಲಿಸಿಕೊಂಡು ಪ್ರಾರಂಭಿಸಬೇಕೆಂದು ಸೂಚಿಸಿದರು.
ಪ್ರತಿದಿನ ಶೇ.50 ವಿದ್ಯಾರ್ಥಿಗಳಿಗೆ ಮಾತ್ರ ತರಗತಿಗೆ ಪ್ರವೇಶ ನೀಡಬೇಕು. ಪ್ರಥಮ, ದ್ವಿತೀಯ, ಪದವಿ ವಿದ್ಯಾರ್ಥಿಗಳಿಗೆ ಆನ್ಲೈನ್ ತರಗತಿ ನಡೆಸಬೇಕೆಂದು ಸೂಚಿಸಿದರು.
ಸಭೆಯಲ್ಲಿ ದ.ಕ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ರಾಮಚಂದ್ರ ಬಾಯರಿ, ವಿಶೇಷ ಅಧಿಕಾರಿ ಶ್ರೀಧರ್, ಡಾ.ದಯಾನಂದ್ ಪೈ, ಸತೀಶ್ ಪೈ ಸೇರಿದಂತೆ ವಿವಿಧ ಖಾಸಗಿ ಮತ್ತು ಸರ್ಕಾರಿ
ಕಾಲೇಜಿನ ಪ್ರಾಂಶುಪಾಲರು ಉಪಸ್ಥಿತರಿದ್ದರು.
Kshetra Samachara
13/11/2020 10:16 pm