ಮಂಗಳೂರು: ವಿಶೇಷ ಶಿಕ್ಷಕರ ಅಳಲು ಆಲಿಸಲು ಸರ್ಕಾರ ಮುಂದಾಗಬೇಕು ಎಂದು ಕಿನ್ನಿಗೋಳಿ ಚರ್ಚ್‌ನ ಪ್ರಧಾನ ಧರ್ಮಗುರು ಫಾ. ಮ್ಯಾಥ್ಯೂ ವಾಸ್ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಸೇವಾನಿರತ ವಿಶೇಷ ಶಿಕ್ಷಕರು ಮತ್ತು ಸಿಬ್ಬಂದಿಗೆ ಗೌರವಧನ ದ್ವಿಗುಣಗೊಳಿಸಲು ಒತ್ತಾಯಿಸಿ ಕರ್ನಾಟಕ ರಾಜ್ಯ ವಿಕಲಚೇತನರ ಸೇವಾ ಸಂಸ್ಥೆಗಳ ಒಕ್ಕೂಟ ಮತ್ತು ಕರ್ನಾಟಕ ರಾಜ್ಯ ವಿಶೇಷ ಶಿಕ್ಷಕರು ಹಾಗೂ ಶಿಕ್ಷಕೇತರರ ಸಂಘದ ವತಿಯಿಂದ ನಗರದ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಹಮ್ಮಿಕೊಳ್ಳಾಗಿದ್ದ ವಿಶೇಷ ಶಿಕ್ಷಕರ ಧರಣಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿಶೇಷ ಮಕ್ಕಳ ಸೇವೆ ಎಂದರೆ ದೇವರ ಸೇವೆಯಂತೆ. ಅಂತಹ ದೇವರ ಸೇವೆ ಮಾಡುತ್ತಿರುವ ಶಿಕ್ಷಕರ ಅಹವಾಲುಗಳನ್ನು ಸರ್ಕಾರ ಶೀಘ್ರವೇ ಆಲಿಸಿ ಅವರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು. ಧರಣಿಯಲ್ಲಿ ಸಂಘದ ರಾಜ್ಯ ಗೌರವ ಕಾರ್ಯದರ್ಶಿ ಡಾ. ವಸಂತ್ ಕುಮಾರ್ ಶೆಟ್ಟಿ, ಜಿಲ್ಲಾ ಘಟಕದ ಅಧ್ಯಕ್ಷೆ ರೇಷ್ಮಾ ಮಾರ್ಟಿಸ್ ಮೊದಲಾದವರಿದ್ದರು.
Kshetra Samachara
02/12/2020 11:10 pm