ಬಂಟ್ವಾಳ: ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಸಲುವಾಗಿ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಯುವ ಸೌರಭ ಕಾರ್ಯಕ್ರಮವನ್ನು ಶ್ರೀರಾಮ ವಿದ್ಯಾಕೇಂದ್ರಲ್ಲಿ ಬುಧವಾರ ಅಯೋಜಿಸಲಾಯಿತು.
ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಕಾರ್ಯಕ್ರಮ ಉದ್ಘಾಟಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಮತ್ತು ಸಂಸ್ಥೆಯ ಸಂಚಾಲಕ ವಸಂತ ಮಾಧವ ಉಪಸ್ಥಿತರಿದ್ದರು.
ಬೆಳಿಗ್ಗೆಯಿಂದ ಸಂಜೆಯವರೆಗೆ ನಡೆದ ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಪದವಿ ವಿದ್ಯಾರ್ಥಿಗಳು ಹಾಗೂ ಕಲಾವಿದರು ಭರತನಾಟ್ಯ, ನೃತ್ಯ ರೂಪಕ, ಹರಿಕಥೆ, ಕಂಗಿಲು ನೃತ್ಯ, ಹಾಲಾಕ್ಕಿ ನೃತ್ಯ, ಹುಲಿಕುಣಿತ, ಸುಗಮ ಸಂಗೀತ ಮುಂತಾದ ಮನೋರಂಜನಾ ಕಾರ್ಯಕ್ರಮ ನಡೆಸಿಕೊಟ್ಟರು.
ಇದೇ ವೇಳೆ ವಿದ್ಯಾರ್ಥಿ ಸಂಘದ ಉದ್ಘಾಟನೆಯೂ ನಡೆಯಿತು. 2020- 21 ನೇ ಸಾಲಿನ ವಿದ್ಯಾರ್ಥಿ ಸಂಘವನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.
Kshetra Samachara
16/12/2020 07:28 pm