ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ಟೋಬರ್ 15ರ ಬಳಿಕ ಹಂತ ಹಂತವಾಗಿ ಶಾಲಾ-ಕಾಲೇಜು, ಶಿಕ್ಷಣ ಮತ್ತು ತರಬೇತಿ ಸಂಸ್ಥೆಗಳನ್ನು ಪುನರಾರಂಭಗೊಳಿಸಲು ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಹೇಳಿದ್ದಾರೆ.
ಶಾಲೆಗಳೊಂದಿಗೆ ಆನ್‌ಲೈನ್ ಶಿಕ್ಷಣದ ಆಯ್ಕೆವನ್ನು ಮುಂದುವರಿಸಬೇಕು. ಒಂದು ವೇಳೆ ವಿದ್ಯಾರ್ಥಿಗಳು ಆನ್‌ಲೈನ್ ಕ್ಲಾಸ್ ಆಯ್ಕೆ ಮಾಡಿಕೊಂಡರೆ ಅದಕ್ಕೆ ಅನುಮತಿ ನೀಡಬೇಕು. ಪೋಷಕರ ಲಿಖಿತ ಅನುಮತಿ ಇದ್ದರೆ ಮಾತ್ರ ತರಗತಿ ಆರಂಭಿಸಬಹುದು. ಅಷ್ಟೇ ಅಲ್ಲದೆ ಹಾಜರಾತಿ ಕಡ್ಡಾಯಗೊಳಿಸುವ ಹಾಗಿಲ್ಲ ಎಂದು ತಿಳಿಸಿದ್ದಾರೆ.
ಕಾಲೇಜುಗಳು, ಉನ್ನತ ಶಿಕ್ಷಣ ಸಂಸ್ಥೆಗಳ ಪ್ರಾರಂಭದ ಕುರಿತು ಕೇಂದ್ರ ಶಿಕ್ಷಣ ಸಚಿವಾಲಯದ ಜೊತೆ ಸಮಾಲೋಚಿಸಿ ಪರಿಸ್ಥಿತಿಯ ಆಧಾರದ ಮೇಲೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.
Kshetra Samachara
07/10/2020 12:18 am