ಮಂಗಳೂರು: ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಪಾಲನಾ ಸಂಸ್ಥೆಗಳ ಜಿಲ್ಲಾ ತನಿಖಾ ಸಮಿತಿ ಸಭೆ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರ ಅಧ್ಯಕ್ಷತೆಯಲ್ಲಿ ಡಿ.ಸಿ. ಕಚೇರಿ ಸಭಾಂಗಣದಲ್ಲಿ ನಡೆಯಿತು.
ಬಾಲ್ಯದಲ್ಲಿ ಮಕ್ಕಳಿಗೆ ದೊರಕಬೇಕಾದ ಸಮರ್ಪಕ ಪಾಲನೆ, ಪೋಷಣೆಗಳಿಂದ ವಂಚಿತರಾಗದಂತೆ ನೋಡಿಕೊಂಡು ಅವರಿಗೆ ಉತ್ತಮ ಶಿಕ್ಷಣದ ಜೊತೆಗೆ ಉತ್ತಮ ಭವಿಷ್ಯ ರೂಪಿಸಬೇಕೆಂದರು.
ವಿದ್ಯಾರ್ಥಿಗಳು ನಿರಂತರ ಶಾಲೆಗೆ ಗೈರುಹಾಜರಾದಲ್ಲಿ ಮುಖ್ಯೋಪಾಧ್ಯಾಯರು ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡಬೇಕು.
ಬಾಲ್ಯ ವಿವಾಹ, ಬಾಲಕಾರ್ಮಿಕರು, ಮಕ್ಕಳ ನಾಪತ್ತೆಯಂತಹ ಪ್ರಕರಣ ತಡೆಯುವಲ್ಲಿ ಶಿಕ್ಷಕರು ಹೆಚ್ಚಿನ ಮುತುವರ್ಜಿ ವಹಿಸಬೇಕೆಂದು ಸೂಚನೆ ನೀಡಿದರು.
ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಶಿಲ್ಪಾ ಎ.ಜೆ., ಮಕ್ಕಳ ಆಯೋಗದ ಸದಸ್ಯ ಡಿ.ಶಂಕರಪ್ಪ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಗಟ್ರೂಡ್ ವೇಗಸ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ರಾಮಚಂದ್ರ ಬಾಯರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಪಾಪಬೋವಿ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
10/11/2020 01:15 pm