ಬಿಲ್ಲವ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ನೂತನವಾಗಿ ರೂಪುಗೊಂಡ ಶ್ರೀ ನಾರಾಯಣ ಗುರು ಚಾರಿಟೇಬಲ್ ಟ್ರಸ್ಟ್ ಉದ್ಘಾಟನೆ ಹಾಗೂ ಮುಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ ಮತ್ತು ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಮುಲ್ಕಿಯ ಬಿಲ್ಲವ ಸಂಘದ ಶ್ರೀ ನಾರಾಯಣ ಗುರು ಸಭಾಗೃಹದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಉಮಾನಾಥ ಕೋಟ್ಯಾನ್ ವಹಿಸಿ ಮಾತನಾಡಿ, ಪ್ರತಿಭಾವಂತ ವಿದ್ಯಾರ್ಥಿಗಳಿಂದ ಕ್ಷೇತ್ರಕ್ಕೆ ಕೀರ್ತಿ ತರುವ ಕಾರ್ಯವಾಗಿದೆ. ವಿದ್ಯಾರ್ಥಿಗಳ ಪ್ರತಿಭೆಗೆ ಸ್ಪಂದಿಸಿದ ಶಿಕ್ಷಕರ ಹಾಗೂ ಪೋಷಕರ ಕಾರ್ಯ ಶ್ಲಾಘನೀಯವಾಗಿದ್ದು ವಿದ್ಯಾರ್ಥಿಗಳ ಜೀವನದಲ್ಲಿ ಸಂಸ್ಕಾರ ಮತ್ತು ಸಂಸ್ಕೃತಿಯನ್ನು ಅಳವಡಿಸಿಕೊಂಡು ಮಾದರಿಯಾಗಿ ಎಂದರು.
ಮಂಗಳೂರು ಪಣಂಬೂರು ಉತ್ತರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಮಹೇಶ್ ಕುಮಾರ್ ರವರು ಶ್ರೀ ನಾರಾಯಣ ಗುರು ಚಾರಿಟೇಬಲ್ ಟ್ರಸ್ಟ್ ನ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿ ಮುಲ್ಕಿ ಬಿಲ್ಲವ ಸಮಾಜ ಸೇವಾ ಸಂಘದಿಂದ ಸಂಘಟನೆ ಹಾಗೂ ಶಿಕ್ಷಣಕ್ಕೆ ಒತ್ತು ನೀಡುವ ಕಾರ್ಯ ಶ್ಲಾಘನೀಯ, ಸೇವಾಮನೋಭಾವದಿಂದ ಪ್ರಾರಂಭವಾಗುವ ಟ್ರಸ್ಟ್ ನ ಕಾರ್ಯ ಯಶಸ್ವಿಯಾಗಲಿ ಎಂದರು.
ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಮುಲ್ಕಿ ನ. ಪಂ. ಅಧ್ಯಕ್ಷ ಸುಭಾಶ್ ಶೆಟ್ಟಿ, ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷ ಡಾ. ರಾಜಶೇಖರ ಕೋಟ್ಯಾನ್ ,ಹಳೆಯಂಗಡಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಚಂದ್ರಶೇಖರ ನಾನಿಲ್,ಮುಲ್ಕಿ ಶ್ರೀ ನಾರಾಯಣ ಗುರು ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಡಾ.ವಸಂತ ಕುಮಾರ್, ಮುಲ್ಕಿ ಬಿಲ್ಲವ ಸಂಘದ ಅಧ್ಯಕ್ಷ ರಮೇಶ್ ಕೆ ಅಮೀನ್ ಕೊಕ್ಕರ್ ಕಲ್, ಕಾರ್ಯದರ್ಶಿ ಕಮಲಾಕ್ಷ ಬಡಗಿತ್ಲು, ಕೋಶಾಧಿಕಾರಿ ಪ್ರಕಾಶ್ ಸುವರ್ಣ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ ಮುಲ್ಕಿ ಕಿಲ್ಪಾಡಿಯ ಶ್ರೀ ವ್ಯಾಸ ಮಹರ್ಷಿ ಶಾಲೆಯ ವಿದ್ಯಾರ್ಥಿನಿಯರಾದ ಅಕ್ಷತಾ ಕಾಮತ್,ವೀಕ್ಷಾ ವಿ ಶೆಟ್ಟಿ ಮತ್ತು ಮುಲ್ಕಿ ಶ್ರೀ ನಾರಾಯಣ ಗುರು ಆಂಗ್ಲ ಮಾಧ್ಯಮ ಫ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಯಲ್ಲಿ ಪ್ರಥಮ ಸ್ಥಾನ ಪಡೆದ ವಿನೀತ್ ಪಿ ಸುವರ್ಣರನ್ನು ಗೌರವಿಸಲಾಯಿತು ಹಾಗೂ ವಿದ್ಯಾರ್ಥಿಗಳಿಗೆ ಸುಮಾರು 1.5ಲಕ್ಷ ವೆಚ್ಚದಲ್ಲಿ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ ನಡೆಯಿತು
Kshetra Samachara
04/06/2022 07:39 pm