ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಆಳ್ವಾಸ್ ವಿದ್ಯಾರ್ಥಿಸಿರಿ ಅಧ್ಯಕ್ಷರ ಆಯ್ಕೆಗೆ ಆಹ್ವಾನ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಆಯೋಜಿಸುತ್ತಿರುವ ‘ಆಳ್ವಾಸ್ ವಿದ್ಯಾರ್ಥಿಸಿರಿ __2022’ ವಿದ್ಯಾರ್ಥಿ ಸಾಹಿತ್ಯ ಸಂಸ್ಕೃತಿ ಸಮ್ಮೇಳನವು ಡಿಸೆಂಬರ್ ತಿಂಗಳಲ್ಲಿ ವಿದ್ಯಾಗಿರಿಯಲ್ಲಿ ಜರಗಲಿದ್ದು ಈ ಸಮ್ಮೇಳನದ ಅಧ್ಯಕ್ಷರ ಆಯ್ಕೆಗೆ ಪ್ರತಿಭಾನ್ವಿತ ವಿದ್ಯಾರ್ಥಿಗಳಿಂದ ವಿವರಗಳನ್ನು ಆಹ್ವಾನಿಸಲಾಗಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ ಮೋಹನ ಆಳ್ವ ಅವರು ತಿಳಿಸಿದ್ದಾರೆ.

ಭಾಷಣ, ಸಾಹಿತ್ಯ, ಸಾಂಸ್ಕೃತಿಕ ಮೊದಲಾದ ಕ್ಷೇತ್ರಗಳಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳು ಈ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದಾಗಿದೆ. ಕಾಸರಗೋಡು, ಉಡುಪಿ, ದಕ್ಷಿಣಕನ್ನಡ ಹಾಗೂ ಉತ್ತರಕನ್ನಡ ಜಿಲ್ಲಾ ವ್ಯಾಪ್ತಿಯ ಹೈಸ್ಕೂಲು

ಮತ್ತು ಪದವಿ ಪೂರ್ವ ವಿದ್ಯಾರ್ಥಿಗಳು ತಾವು ಕಲಿಯುತ್ತಿರುವ ಸಂಸ್ಥೆಯ ಮುಖ್ಯಸ್ಥರ ದೃಡೀಕರಣ ಪತ್ರ, ಸ್ವಪರಿಚಯದ ವಿವರ ಹಾಗೂ ಪಡೆದ ಪ್ರಮಾಣ ಪತ್ರಗಳ ಜತೆಗೆ ವಿವರಗಳನ್ನು ಕಳುಹಿಸಿಕೊಡಬಹುದಾಗಿದೆ. ಸೆಪ್ಟಂಬರ್ ತಿಂಗಳ ಎರಡನೇ ವಾರದಲ್ಲಿ ಆಯ್ಕೆ ಪಕ್ರಿಯೆಯು ಮೂಡುಬಿದಿರೆ ವಿದ್ಯಾಗಿರಿಯ ಆಳ್ವಾಸ್ ಕ್ಯಾಂಪಸ್‌ನಲ್ಲಿ ನಡೆಯಲಿದೆ.

ಆಯ್ಕೆ ಪ್ರಕ್ರಿಯೆಯು ಲಿಖಿತ ಪರೀಕ್ಷೆ, ಆಶು ಭಾಷಣ ಹಾಗೂ ಸಂದರ್ಶನಗಳನ್ನು ಒಳಗೊಂಡಿರುತ್ತದೆ. ಇದೇ ಸಂದರ್ಭದಲ್ಲಿ ಸಮ್ಮೇಳನದ ಕವಿಗೋಷ್ಠಿಯ ಅಧ್ಯಕ್ಷರನ್ನೂ, ಸಮಾರೋಪ ಭಾಷಣ ಮಾಡುವವರನ್ನು ಆಯ್ಕೆ ಮಾಡಲಾಗುವುದು. ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಲ್ಲಿ ಅರ್ಹರಿಗೆ ಸಮ್ಮೇಳನದಲ್ಲಿ ಅವಕಾಶಗಳನ್ನು ನೀಡಲಾಗುವುದು. ವಿಶಿಷ್ಟ ವೈಯಕ್ತಿಕ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೂ ಸಮ್ಮೇಳನದಲ್ಲಿ ಭಾಗವಹಿಸಲು ಅವಕಾಶವಿದ್ದು ಅವರು ತಮ್ಮ ಸ್ವವಿವರವನ್ನು ಅಧ್ಯಕ್ಷರು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ಮೂಡುಬಿದಿರೆ- 574227ಈ ವಿಳಾಸಕ್ಕೆ ಕಳುಹಿಸಿಕೊಡಬಹುದಾಗಿದೆ. ಹೆಚ್ಚಿನ ವಿವರಗಳಿಗೆ 94 81326858/ 8310300875 ಸಂಖ್ಯೆಯನ್ನು ಸಂಪರ್ಕಿಸಬಹುದು.

Edited By : PublicNext Desk
Kshetra Samachara

Kshetra Samachara

22/08/2022 10:00 pm

Cinque Terre

1.17 K

Cinque Terre

0

ಸಂಬಂಧಿತ ಸುದ್ದಿ