ನಗರದ ಹಂಪನಕಟ್ಟೆಯ ವಿವಿ ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿಗಳ ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯಗೊಂಡಿರುವ ಹಿನ್ನೆಲೆಯಲ್ಲಿ ಸಮಾನ ಮನಸ್ಕ ವಿದ್ಯಾರ್ಥಿ ಘಟಕ ಏಕಾಏಕಿಯಾಗಿ ಕಾಲೇಜಿಗೆ ಮುತ್ತಿಗೆ ಹಾಕಿತು.
ವಿವಿ ಕಾಲೇಜಿನಲ್ಲಿ 3-4 ದಿನಗಳ ಹಿಂದೆ ತರಗತಿಯಲ್ಲಿ ವಿದ್ಯಾರ್ಥಿಯೊಬ್ಬ ಸಾವರ್ಕರ್ ಫೋಟೋವನ್ನು ಅಳವಡಿಸಿದ್ದ. ಇದರ ವೀಡಿಯೋ ವೈರಲ್ ಆಗಿತ್ತು. ಈ ಬಗ್ಗೆ ಕಾನೂನು ಕ್ರಮ ಕೈಗೊಳ್ಳುವಂತೆ ವಿದ್ಯಾರ್ಥಿ ತಂಡ ಕಾಲೇಜು ಪ್ರಾಂಶುಪಾಲರಿಗೆ ಮನವಿ ಮಾಡಿದ್ದರು. ಆದರೆ ಈ ಬಗ್ಗೆ ಕ್ರಮ ಕೈಗೊಳ್ಳುವ ಬದಲು. 'ದೇಶದ್ರೋಹಿ' ಸಾವರ್ಕರ್ ಎಂಬ ಪದವನ್ನು ಉಲ್ಲೇಖಿಸಿರುವ ಬಗ್ಗೆ ಮನವಿ ನೀಡಿರುವ ವಿದ್ಯಾರ್ಥಿಗಳ ಮೇಲೆ ನೋಟಿಸ್ ಜಾರಿ ಮಾಡಿದ್ದಾರೆ. ಅಲ್ಲದೆ ಇಂದು ಮೂವರು ವಿದ್ಯಾರ್ಥಿಗಳ ಮೇಲೆ 40 ಎಬಿವಿಪಿ ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆಂದು ಆರೋಪಿಸಿ ಪ್ರತಿಭಟನೆ ನಡೆಸಿದ್ದಾರೆ.
ಇದೀಗ ಪ್ರತಿಭಟನೆ ನಡೆಸಿ ಸಮಾನ ಮನಸ್ಕ ವಿದ್ಯಾರ್ಥಿಗಳ ಒಕ್ಕೂಟ ವಿವಿ ಕಾಲೇಜಿಗೆ ಮುತ್ತಿಗೆ ಹಾಕಿದ್ದಾರೆ. ಅಲ್ಲದೆ ಎಬಿವಿಪಿ ವಿದ್ಯಾರ್ಥಿಗಳ ಮೇಲೆ ಕ್ರಮ ಕೈಗೊಳ್ಳದ ಪ್ರಾಂಶುಪಾಲರನ್ನು ಅಮಾನತು ಮಾಡಬೇಕು. ಒಂದು ವಾರದೊಳಗೆ ಘರ್ಷಣೆಗೆ ಕಾರಣರಾದ ವಿದ್ಯಾರ್ಥಿಗಳ ಮೇಲೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
PublicNext
10/06/2022 07:46 pm