ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವೆಂಬರ್ ಮೊದಲ ವಾರದಿಂದ ಮಂಗಳೂರು ವಿವಿಯಲ್ಲಿ ತರಗತಿಗಳ ಪ್ರಾರಂಭ ಸಾಧ್ಯತೆ

ಮಂಗಳೂರು : ಮಂಗಳೂರು ವಿಶ್ವವಿದ್ಯಾಲಯದ ಪದವಿ ಮತ್ತು ಸ್ನಾತಕೋತ್ತರ ತರಗತಿಗಳು ನವೆಂಬರ್ ಮೊದಲ ವಾರದಿಂದ ಪ್ರಾರಂಭವಾಗುವ ಸಾಧ್ಯತೆ ಇದೆ.

ಈ ಬಗ್ಗೆ ಮಾಹಿತಿ ನೀಡಿರುವ ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪಿ.ಎಸ್. ಯಡಪಡಿತ್ತಾಯ ಅವರು, ಯುಜಿಸಿ ನೀಡಿದ ನಿರ್ದೇಶನದ ಪ್ರಕಾರ, ನವೆಂಬರ್ 1 ರಿಂದ ತರಗತಿಗಳನ್ನು ಪ್ರಾರಂಭಿಸಲು ನಾವು ಸಿದ್ಧತೆ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳು ನಡೆಯುತ್ತಿದ್ದು ಸೆಪ್ಟೆಂಬರ್ ಅಂತ್ಯದ ವೇಳೆಗೆ ಪೂರ್ಣಗೊಳ್ಳುತ್ತವೆ.

ಅಕ್ಟೋಬರ್ 20 ರ ಮೊದಲು ಫಲಿತಾಂಶಗಳನ್ನು ಪ್ರಕಟಿಸುವ ಸಾಧ್ಯತೆಯಿದೆ. ನವೆಂಬರ್ 1 ರಿಂದಲೇ ಸ್ನಾತಕೋತ್ತರ ಕೋರ್ಸ್ಗಳ ತರಗತಿಗಳನ್ನು ಪ್ರಾರಂಭಿಸಲು ನಾವು ಯೋಜಿಸಿದ್ದೇವೆ ಎಂದು ಹೇಳಿದ್ದಾರೆ.

ಈ ಶೈಕ್ಷಣಿಕ ವರ್ಷದ ಪ್ರವೇಶ ಪ್ರಕ್ರಿಯೆಯನ್ನು ಆನ್ ಲೈನ್ ಮತ್ತು ಆಫ್ ಲೈನ್ ನಲ್ಲಿ ಮಾಡಲಾಗುವುದು.

ಆದರೆ ನಮ್ಮ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಬರುವ ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಗಳ ಕೊರೊನಾ ಪರಿಸ್ಥಿತಿಯನ್ನು ನಾವು ಪರಿಶೀಲಿಸುತ್ತೇವೆ.

ಬಳಿಕ ತರಗತಿಗಳ ಆರಂಭಕ್ಕೆ ಅನುಮತಿ ಪಡೆಯುತ್ತೇವೆ ಎಂದು ಮಾಹಿತಿ ನೀಡಿದರು.

Edited By : Nirmala Aralikatti
Kshetra Samachara

Kshetra Samachara

28/09/2020 04:30 pm

Cinque Terre

6.29 K

Cinque Terre

0

ಸಂಬಂಧಿತ ಸುದ್ದಿ