ಮಂಗಳೂರು: ಕಣಚೂರು ಕಾಲೇಜ್ ಆಫ್ ನರ್ಸಿಂಗ್ ಸೈನ್ಸ್ ನ ಅಂತಿಮ ವಿಭಾಗದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ 'ಅಲೋಹಾ -2020' ಕಣಚೂರು ಆಸ್ಪತ್ರೆ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಕಣಚೂರು ಇಸ್ಲಾಮಿಕ್ ಎಜುಕೇಷನ್ ಟ್ರಸ್ಟ್ ಅಧ್ಯಕ್ಷ ಯು.ಕೆ. ಕಣಚೂರು ಮೋನು ಉದ್ಘಾಟಿಸಿ ಮಾತನಾಡಿದರು.
ಇದೇ ಸಂದರ್ಭ ಕಣಚೂರು ಸಂಸ್ಥೆಯಲ್ಲಿ ನರ್ಸಿಂಗ್ ಪೂರೈಸಿದ 58 ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.
ಮುಖ್ಯ ಅತಿಥಿಗಳಾಗಿ ಕಣಚೂರು ಇಸ್ಲಾಮಿಕ್ ಎಜುಕೇಷನ್ ಟ್ರಸ್ಟ್ ನ ನಿರ್ದೇಶಕ ಅಬ್ದುಲ್ ರೆಹಮಾನ್, ಕಣಚೂರು ಕಾಲೇಜ್ ಆಫ್ ನರ್ಸಿಂಗ್ ಸೈನ್ಸ್ ಪ್ರಾಂಶುಪಾಲೆ ಪ್ರೊ. ಮೋಲಿ ಸಲ್ದಾನಾ, ಕಣಚೂರು ಆಸ್ಪತ್ರೆ ಮತ್ತು ರಿಸರ್ಚ್ ಸೆಂಟರ್ ಆಡಳಿತಾಧಿಕಾರಿ ಡಾ. ರೋಹನ್ ಮೋನಿಸ್, ಕಣಚೂರು ವೈದ್ಯಕೀಯ ಕಾಲೇಜಿನ ಡೀನ್ ಡಾ.ಎಚ್.ಎಸ್. ವಿರೂಪಾಕ್ಷ ಉಪಸ್ಥಿತರಿದ್ದರು.
Kshetra Samachara
08/01/2021 11:38 am