ಮುಲ್ಕಿ: ಸುರತ್ಕಲ್ ಸಮೀಪದ ಮಧ್ಯ ಬಳಿಯ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಹಿರಿಯ ಪ್ರಾಥಮಿಕ ಶಾಲೆಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ತರಬೇತಿ ಕಾರ್ಯಾಗಾರ ನಡೆಯಿತು.
ಉದ್ಘಾಟನೆಯನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಭಗವಾನ್ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಚೇಳೈರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ, ಸಂಪನ್ಮೂಲ ವ್ಯಕ್ತಿ ಶಿಕ್ಷಣ ಇಲಾಖೆಯ ಗೀತಾ, ಶಾಲಾ ಹಿರಿಯ ಶಿಕ್ಷಕಿ ಕುಸುಮಾ,ರವೀಂದ್ರ ಶೆಟ್ಟಿ, ಹರೀಶ್,ಶೋಭಾ,ಶೈಲಜಾ ಮುಂತಾದವರು ಉಪಸ್ಥಿತರಿದ್ದರು.
Kshetra Samachara
22/01/2021 11:02 pm