ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಎನ್ಎಸ್‌ಯುಐ‌ನಿಂದ ಶ್ರೀದೇವಿ ಕಾಲೇಜ್​ನಲ್ಲಿ ‘ಕ್ಯಾಂಪಸ್ ಗೇಟ್ ಮೀಟ್’ ಪೋಸ್ಟರ್ ಅಭಿಯಾನ

ಮಂಗಳೂರು: ನಗರದ ಶ್ರೀದೇವಿ ಕಾಲೇಜ್​ನಲ್ಲಿ ದ.ಕ.ಜಿಲ್ಲಾ ಎನ್ಎಸ್‌ಯುಐ ವತಿಯಿಂದ ‘ಕ್ಯಾಂಪಸ್ ಗೇಟ್ ಮೀಟ್’ ಪೋಸ್ಟರ್ ಅಭಿಯಾನ ನಡೆಯಿತು.

ಮಂಗಳೂರು ಎನ್ಎಸ್‌ಯುಐ ದ.ಕ.ಜಿಲ್ಲಾಧ್ಯಕ್ಷ ಸವಾದ್ ಸುಳ್ಯ ನೇತೃತ್ವದಲ್ಲಿ ನಡೆದ ಅಭಿಯಾನದಲ್ಲಿ ಎನ್ಎಸ್‌ಯುಐ ಪದಾಧಿಕಾರಿಗಳು ಕಾಲೇಜು ಶುಲ್ಕ, ಸ್ಕಾಲರ್ ಶಿಪ್, ಬಸ್ ಪಾಸ್, ರ್‍ಯಾಗಿಂಗ್, ಮಾದಕ ದ್ರವ್ಯ ಮತ್ತಿತರ ವಿಚಾರಗಳ ಬಗ್ಗೆ ವಿದ್ಯಾರ್ಥಿಗಳೊಂದಿಗೆ ಚರ್ಚಿಸಿ, ಬಳಿಕ ಅವರ ಸಮಸ್ಯೆಗಳನ್ನು ಆಲಿಸಿದರು.

ಈಗಾಗಲೇ ದ.ಕ.ಜಿಲ್ಲೆಯ ಮಂಗಳೂರು, ಸುಳ್ಯ, ಮೂಡುಬಿದಿರೆ ಸೇರಿ ಎಂಟು ಕಾಲೇಜುಗಳಲ್ಲಿ ಈ ಅಭಿಯಾನ ನಡೆಸಲಾಗಿದೆ. ಆದರೆ, ಈ ವೇಳೆ ಬಹುತೇಕ ವಿದ್ಯಾರ್ಥಿಗಳು ಕಾಲೇಜಿನಲ್ಲಿ ಪೂರ್ಣ ಶುಲ್ಕ ಪಾವತಿ ಮಾಡುವ ಬಗ್ಗೆ ಒತ್ತಾಯ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ. ಈ ಬಗ್ಗೆ ದ.ಕ.ಜಿಲ್ಲೆಯ ಎಲ್ಲ ಕಾಲೇಜುಗಳ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಿ ಮುಂದಿನ ದಿನಗಳಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತದೆ. ಬಳಿಕ ವಿದ್ಯಾರ್ಥಿಗಳ ಎಲ್ಲ ಸಮಸ್ಯೆಗಳನ್ನು ಪರಿಹಾರ ಮಾಡಲು ಆಗ್ರಹಿಸಿ ಜಿಲ್ಲಾಧಿಕಾರಿ ಮೂಲಕ ಸಿಎಂ ಹಾಗೂ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಗುತ್ತದೆ ಎಂದು ಎನ್ಎಸ್‌ಯುಐ ದ.ಕ. ಜಿಲ್ಲಾಧ್ಯಕ್ಷ ಸವಾದ್ ಸುಳ್ಯ ಹೇಳಿದರು.

ಈ ಅಭಿಯಾನದಲ್ಲಿ ಎನ್ಎಸ್‌ಯುಐ ಬಂಟ್ವಾಳ ಅಧ್ಯಕ್ಷ ವಿನಯ್‌ ಹಾಗೂ ಶ್ರೀದೇವಿ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದರು.

Edited By : Vijay Kumar
Kshetra Samachara

Kshetra Samachara

11/02/2021 09:38 pm

Cinque Terre

2.5 K

Cinque Terre

0

ಸಂಬಂಧಿತ ಸುದ್ದಿ