ಮಂಗಳೂರು:ದ.ಕ ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಮಂಗಳೂರು ಗ್ರಾಮಾಂತರ ವ್ಯಾಪ್ತಿಯ ಪಡುಪೆರಾರ ಗ್ರಾಮ ಪಂಚಾಯತ್ ಮುರ ಬಾಲವಾಡಿ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಉದ್ಘಾಟನಾ ಸಮಾರಂಭವನ್ನು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ವೈ ಭರತ್ ಶೆಟ್ಟಿ ನೆರವೇರಿಸಿದರು.
ಈ ಸಂಧರ್ಭದಲ್ಲಿ ಮುಖ್ಯ ಅತಿಥಿಗಳಾಗಿ
ಮಾಜೀ ಜಿ. ಪಂ. ಸದಸ್ಯ ಜನಾರ್ದನ ಗೌಡ ಮುಚ್ಚೂರು, ಪಂಚಾಯತ್ ಅಧ್ಯಕ್ಷ ಅಮಿತಾ ಮೋಹನ್ ಶೆಟ್ಟಿ, ಉಪಾಧ್ಯಕ್ಷೆ ಸೇಸಮ್ಮ, ಮಂಗಳೂರು ಗ್ರಾಮಾಂತರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಹರೀಶ್ ಕೆ, ಪಡುಪೆರಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಉಗ್ಗಪ್ಪ ಮೂಲ್ಯ, ಮತ್ತಿತರರು ಉಪಸ್ಥಿತರಿದ್ದರು.
Kshetra Samachara
11/09/2021 01:49 pm