ಮಂಗಳೂರು: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ತಿರುವೈಲ್ ದ. ಕ. ಜಿ. ಪಂ. ಕನ್ನಡ ಮತ್ತು ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕರಾದ ಡಾ.ವೈ ಭರತ್ ಶೆಟ್ಟಿ ಯವರು ಸೋಮವಾರ ಭಾಗವಹಿಸಿದರು.
ಕಾರ್ಯಕ್ರಮದಲ್ಲಿ ಅವರು ಅಕ್ಷರ ವಾಹಿನಿ ಶಾಲಾ ವಾಹನವನ್ನು ಶಾಲಾ ವಿದ್ಯಾರ್ಥಿಗಳ ಉಪಯೋಗಕ್ಕಾಗಿ ಲೋಕಾರ್ಪಣೆಗೊಳಿಸಿದರು. ಆಂಗ್ಲ ಮಾಧ್ಯಮ ತರಗತಿ ಹಾಗೂ ಶಾಲಾ ವಾಹನ ತಂಗುದಾಣವನ್ನ ಉದ್ಘಾಟಿಸಲಾಯಿತು.
ಕಾರ್ಯಕ್ರಮದಲ್ಲಿ ಮೇಯರ್ ಪ್ರೇಮಾನಂದ ಶೆಟ್ಟಿ, ಉಪಮೇಯರ್ ಸುಮಂಗಲಾ ರಾವ್, ತಿರುವೈಲ್ ವಾರ್ಡ್ ಕಾರ್ಪೋರೇಟರ್ ಹೇಮಲತಾ ರಘು ಸಾಲಿಯಾನ್ ಮತ್ತಿತರರು ಉಪಸ್ಥಿತರಿದ್ದರು
Kshetra Samachara
27/09/2021 10:27 pm