ಬೈಕಂಪಾಡಿ:ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಸಾಮಾಜಿಕ ಸೇವಾ ಸಂಘಟನೆ ಬೈಕಂಪಾಡಿ ವಿದ್ಯಾರ್ಥಿ ಸಂಘ ಇದರ ವತಿಯಿಂದ ಆರಾಧಿಸಲ್ಪಡುವ 7 ನೇ ವರ್ಷದ ಶ್ರೀ ಶಾರದಾ ಮಹೋತ್ಸವ ನಡೆಯುವ ಇಂದಿರಾ ಮಾಧವ ವಿದ್ಯಾರ್ಥಿ ಭವನಕ್ಕೆ ಶಾಸಕರಾದ ಡಾ.ಭರತ್ ಶೆಟ್ಟಿಯವರು ಭೇಟಿ ನೀಡಿ ದೇವಿಯ ದರ್ಶನ ಮಾಡಿದರು.
ಕೊರೊನಾ ವಾರಿಯರ್ಸ್ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಚಿತ್ರಾಪುರ ಮಠದ ವಿದ್ಯೇಂದ್ರ ತೀರ್ಥ ಶ್ರೀಪಾದರು ಹಾಗೂ ನಾಮನಿರ್ದೇಶಿತ ಸದಸ್ಯ ರಾಜೇಶ್ ಬೈಕಂಪಾಡಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
13/10/2021 10:07 am