ಮುಲ್ಕಿ: ಕಿನ್ನಿಗೋಳಿ ಸಮೀಪದ ಕೊಲ್ಲೂರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ತವ್ಯದಿಂದ ನಿವೃತ್ತಿ ಹೊಂದಿದ ಶಾಲಾ ಮುಖ್ಯೋಪಾಧ್ಯಾಯಿನಿ ಚಿತ್ರಾಕ್ಷಿ ರವರಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕೊಲ್ಲೂರು ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಐತಪ್ಪ ಸಾಲ್ಯಾನ್ ಮಾತನಾಡಿ ಜೀವನದಲ್ಲಿ ಮನುಷ್ಯನು ತನ್ನ ವೃತ್ತಿಯನ್ನು ಸಾರ್ಥಕವಾಗಿ ನಿಭಾಯಿಸಿದರೆ ಜನ ಗುರುತಿಸುತ್ತಾರೆ ಎಂದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕೊಲ್ಲೂರು ಆಯುಷ್ ಆಯುರ್ವೇದ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಶೋಭಾರಾಣಿ, ಪದ್ಮನೂರು ಕ್ಲಸ್ಟರ್ ನ ಸಮೂಹ ಸಂಪನ್ಮೂಲ ವ್ಯಕ್ತಿ ರಾಮದಾಸ ಭಟ್, ಸಂಘದ ಅಧ್ಯಕ್ಷ ಉಮೇಶ್ ನಾಯ್ಕ, ಶಾಲಾ ಉಸ್ತುವಾರಿ ಸಮಿತಿ ಅಧ್ಯಕ್ಷೆ ಗೀತಾ ನಾಯ್ಕ, ಮುಖ್ಯೋಪಾಧ್ಯಾಯಿನಿ ಸುನೀತಾ ಡಿಸೋಜಾ, ಸ್ತ್ರೀಶಕ್ತಿ ಸಂಘದ ಅಧ್ಯಕ್ಷೆ ವಾರಿಜಾ, ಸದಾಶಿವ ನಾಯ್ಕ್, ಎಲ್ಲಪ್ಪ ಟಿ ಸಾಲ್ಯಾನ್, ಕುಟ್ಟಿ ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
22/11/2021 09:14 pm